ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲಾ ಸಂಕೀರ್ಣ ನಿರ್ಮಾಣಕ್ಕೆ ತಿಂಗಳಲ್ಲಿ ಸಿಎಂ ಚಾಲನೆ: ಖಂಡ್ರೆ

Published : 18 ಸೆಪ್ಟೆಂಬರ್ 2024, 12:38 IST
Last Updated : 18 ಸೆಪ್ಟೆಂಬರ್ 2024, 12:38 IST
ಫಾಲೋ ಮಾಡಿ
Comments

ಹೆಡಗಾಪೂರ (ಬೀದರ್‌): ‘ಬೀದರ್‌ನಲ್ಲಿ ನೂತನ ಜಿಲ್ಲಾ ಆಡಳಿತ ಸಂಕೀರ್ಣ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಂಗಳಲ್ಲಿ ಚಾಲನೆ ನೀಡುವರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ಬುಧವಾರ ಇಲ್ಲಿ ನಡೆದ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ₹60 ಕೋಟಿ ವೆಚ್ಚದಲ್ಲಿ ಜಿಲ್ಲಾ ಸಂಕೀರ್ಣ ನಿರ್ಮಾಣಕ್ಕೆ ಕಲಬುರಗಿಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದರು.

ಅದೇ ರೀತಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಹೊನ್ನಿಕೇರಿ ಹಾಗೂ ದೇವ ದೇವ ವನದಲ್ಲಿ ಎಕೋ ಟೂರಿಸಂ ಪಾರ್ಕ್‌ ನಿರ್ಮಾಣಕ್ಕೂ ಒಪ್ಪಿಗೆ ಸಿಕ್ಕಿದ್ದು, ಎರಡಕ್ಕೂ ತಲಾ ₹15 ಕೋಟಿ ಮಂಜೂರಾಗಿದೆ ಎಂದು ತಿಳಿಸಿದರು.

ಬೀದರ್‌ ಜಿಲ್ಲೆಯ ಎಲ್ಲ ಜನವಸತಿ ಪ್ರದೇಶಗಳಲ್ಲಿ ಶಾಶ್ವತ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾರಾಯಣಪುರದ ಬಸವಸಾಗರ ಜಲಾಶಯದಿಂದ ನೀರು ತರಲು ನಿರ್ಧರಿಸಲಾಗಿದೆ. ₹7 ಸಾವಿರ ಕೋಟಿ ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಕೆಯೂ ಅನುಮೋದನೆ ಸಿಕ್ಕಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT