ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 9ರಂದು ನಡೆಯಲಿರುವ ಬೀದರ್ ಉತ್ಸವದ ಸಮಾರೋಪ ಸಮಾರಂಭಕ್ಕೆ ಬರಲು ಒಪ್ಪಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಬೀದರ್ ಉತ್ಸವದ ಉದ್ಘಾಟನೆಗೆ ಬರುವಂತೆ ಆಹ್ವಾನ ಪತ್ರಿಕೆ ನೀಡಿತು. ಕಾರ್ಯಕ್ರಮಗಳ ಒತ್ತಡ ಇರುವ ಕಾರಣ ಮುಖ್ಯಮಂತ್ರಿ ಅವರು ಉತ್ಸವದ ಕೊನೆಯ ದಿನ ಬರುವ ಭರವಸೆ ನೀಡಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ರಾಜ್ಯ ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಜಿ.ಮುಳೆ, ರಾಜ್ಯ ಹಜ್ ಕಮಿಟಿ ಅಧ್ಯಕ್ಷ ರೌಫೋದ್ದಿನ್ ಕಚೇರಿವಾಲೆ, ಬುಡಾ ಅಧ್ಯಕ್ಷ ಬಾಬು ವಾಲಿ ಹಾಗೂ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.