ಬೀದರ್: ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದವರು ಇಲ್ಲಿನ ನಗರಸಭೆ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮಂಗಳವಾರ ಭೇಟಿ ನೀಡಿದರು.

ಪೌರ ಕಾರ್ಮಿಕರ ಅಹವಾಲು ಸ್ವೀಕರಿಸಿದ ಅವರು, ಸ್ಥಳದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ, ಮಾತನಾಡಿದರು. ಆದಷ್ಟು ಶೀಘ್ರ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಪೌರ ಕಾರ್ಮಿಕರು ಅನೇಕ ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕೆಲಸ ನಿರ್ವಹಿಸುತ್ತಿದ್ದು, ಅವರ ಕೆಲಸ ಕಾಯಂಗೊಳಿಸಬೇಕು. ಪ್ರತಿ ತಿಂಗಳ ವೇತನವನ್ನು ಅವರ ಖಾತೆಗೆ ಜಮೆ ಮಾಡಬೇಕೆಂದು ಎರಡು ಪ್ರಮುಖವಾದ ಬೇಡಿಕೆಗಳನ್ನು ಇಟ್ಟಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಚರ್ಚಿಸಿದ್ದೇನೆ. ಶೀಘ್ರದಲ್ಲಿ ಈ ಸಂಬಂಧ ಸಭೆ ನಡೆಸಿ, ಅವರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಈ ವಿಷಯ ನನ್ನ ಖಾತೆಯ ಜೊತೆಗೆ ನಗರಾಭಿವೃದ್ಧಿ ಖಾತೆಗೂ ಬರುತ್ತದೆ. ಈ ಬಗ್ಗೆ ಸಂಬಂಧಿಸಿದ ಎಲ್ಲ ಸಚಿವರು ಸಿಎಂ ಜೊತೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.