ಗುರುವಾರ , ಮಾರ್ಚ್ 30, 2023
23 °C

ಕ. ಮಹಿಳಾ ಪ್ರಮುಖರ ಸಭೆ 6,7ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೀದರ್: ಸೇಡಂನ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆ ಸಂಚಾಲಿತ ವಿಕಾಸ ಅಕಾಡೆಮಿಯ ಕಲ್ಯಾಣ ಕರ್ನಾಟಕ ಮಹಿಳಾ ಪ್ರಮುಖರ ಸಭೆ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪದಲ್ಲಿ ನ. 6 ಮತ್ತು 7 ರಂದು ನಡೆಯಲಿದೆ ಎಂದು ವಿಕಾಸ ಅಕಾಡೆಮಿಯ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ರಾಜ್ಯಸಭೆ ಮಾಜಿ ಸದಸ್ಯರೂ ಆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹಾಗೂ ಚಿಂತಕಿ ಲೀಲಾ ಕಾರಟಗಿ ಅವರು ಮಾರ್ಗದರ್ಶನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಬಸವರಾಜ ಪಾಟೀಲ ಅವರು ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಅವಿತರ ಶ್ರಮಿಸುತ್ತಿದ್ದಾರೆ. ಸಭೆಯಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.