ಬೀದರ್: ಅಂಗವಿಕಲರಿಗೆ ಸಾಧನ, ಸಲಕರಣೆ ವಿತರಣೆಗಾಗಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಅಧೀನದ ಪಂಡಿತ ದೀನದಯಾಳ್ ಉಪಾಧ್ಯಾಯ ದೈಹಿಕ ಅಂಗವಿಕಲರ ಸಂಸ್ಥೆಯ ಸಿಕಂದರಾಬಾದ್‍ನ ದಕ್ಷಿಣ ಪ್ರಾದೇಶಿಕ ಕೇಂದ್ರದ ವತಿಯಿಂದ ಮೂರು ದಿನಗಳ ಮೌಲ್ಯಮಾಪನ ಶಿಬಿರ ಇಲ್ಲಿಯ ಶಹಾಪುರ ಗೇಟ್ ಬಳಿಯ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ಆರಂಭಗೊಂಡಿತು.

ಸಸಿಗೆ ನೀರೆರೆಯುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ರಹೀಂಖಾನ್ ಅವರು, ಅಂಗವಿಕಲರಿಗೆ ಪಂಡಿತ ದೀನದಯಾಳ್ ಉಪಾಧ್ಯಾಯ ದೈಹಿಕ ಅಂಗವಿಕಲರ ಸಂಸ್ಥೆಯ ವತಿಯಿಂದ ಅಗತ್ಯ ಸಾಧನ, ಸಕಲರಣೆಗಳನ್ನು ದೊರಕಿಸಿ ಕೊಡಲು ಶಾಹೀನ್ ಸೇರಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರ ಸಂಘಟಿಸಿರುವುದು ಶ್ಲಾಘನೀಯವಾಗಿದೆ. ಜಿಲ್ಲೆಯ ಅಂಗವಿಕಲರು ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಮಾತನಾಡಿ, ಹೈದರಾಬಾದ್ ಹಾಗೂ ನವದೆಹಲಿಯ ನಾಲ್ವರು ಪರಿಣಿತ ವೈದ್ಯರು ಶಿಬಿರದಲ್ಲಿ ಅಂಗವಿಕಲರ ಮಾಲ್ಯಮಾಪನ ಮಾಡಲಿದ್ದಾರೆ. ಶಿಬಿರ 19 ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ಮೌಲ್ಯಮಾಪನಕ್ಕೆ ಒಳಗಾದವರಿಗೆ ಪಂಡಿತ ದೀನದಯಾಳ್ ಉಪಾಧ್ಯಾಯ ದೈಹಿಕ ಅಂಗವಿಕಲರ ಸಂಸ್ಥೆಯು ಬರುವ ದಿನಗಳಲ್ಲಿ ತ್ರಿಚಕ್ರ ಸೈಕಲ್, ಮಡಚುವ ಗಾಲಿ ಕುರ್ಚಿ, ಸಹಾಯಕ ಊರುಗೋಲು, ಮೊಣಕೈ ಊರುಗೋಲು, ಮಡಚುವ ವಾಕರ್, ರೊಲೇಟರ್(ಬಿ), ಸಿ.ಪಿ. ಕುರ್ಚಿ, ಎಂ.ಆರ್. ಕಿಟ್, ಸ್ಮಾರ್ಟ್ ಕೇನ್ (ದೃಷ್ಟಿಹೀನ), ಎಡಿಎಲ್ ಕಿಟ್ ಹಾಗೂ ಕುಷ್ಠರೋಗ ಬಾಧಿತರಿಗೆ ಕೃತಕ ಅಂಗ ಹಾಗೂ ಕ್ಯಾಲಿಪರ್ ಸೇರಿ 12 ವಿಧದ ಸಾಧನ, ಸಲಕರಣೆಗಳನ್ನು ವಿತರಿಸಲಿದೆ ಎಂದು ಹೇಳಿದರು.

ಜಿಲ್ಲಾ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಚನ್ನಬಸಪ್ಪ ಹಾಲಹಳ್ಳಿ, ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ, ರೋಟರಿ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಶಿವಕುಮಾರ ಯಲಾಲ್, ಡಾ. ಮಕ್ಸೂದ್ ಚಂದಾ, ಬಾಬು ರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.