ಬೀದರ್: ‘ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ರೋಟರಿ ಕ್ಲಬ್ ಆಫ್ ಬೀದರ್, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಹಾಗೂ ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್ ವತಿಯಿಂದ ನಗರದ ಘಾಳೆ ಕನ್ವೆನ್ಶನ್ ಹಾಲ್‍ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ತಮ್ಮ ಸಚಿವಾಲಯ ಅಧೀನದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕೆಲಸ, ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಮ್ಮ ಅಧಿಕಾರ ಅವಧಿಯಲ್ಲಿ ಬೀದರ್‌ನಿಂದ ನಾಗರಿಕ ವಿಮಾನಯಾನ ಸೇವೆ, ಹೊಸ ರೈಲುಗಳು, ಹೊಸ ಹೆದ್ದಾರಿಗಳು, ಪಾಸ್‍ಪೋರ್ಟ್ ಸೇವಾ ಕೇಂದ್ರ ಸ್ಥಾಪನೆ ಸೇರಿದಂತೆ ಹಲವು ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೂ ಒತ್ತು ಕೊಡಲಾಗಿದೆ ಎಂದು ಹೇಳಿದರು.
ಬೀದರ್-ದೆಹಲಿ ವಯಾ ಕಲಬುರ್ಗಿ ಹೊಸ ರೈಲು ಆರಂಭಿಸಬೇಕು. ಈ ಭಾಗದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಬೇಕು ಎಂಬಿತ್ಯಾದಿ ಸಲಹೆಗಳಿಗೆ ಸ್ಪಂದಿಸಿದ ಅವರು, ಈ ದಿಸೆಯಲ್ಲಿ ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.
ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಸೆವೆನ್ ಏರಿಯಾಸ್ ಫೋಕಸ್ ಅಧ್ಯಕ್ಷ ಬಸವರಾಜ ಧನ್ನೂರ, ಜಿಲ್ಲಾ ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ, ರೋಟರಿ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಶಿವಕುಮಾರ ಯಲಾಲ್, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಡಾ. ನಿತೇಶಕುಮಾರ ಬಿರಾದಾರ, ರೋಟರಿ ಕ್ಲಬ್ ಆಫ್ ಬೀದರ್ ಕ್ವೀನ್ಸ್ ಅಧ್ಯಕ್ಷೆ ಸುಷ್ಮಾ ಪಾಟೀಲ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸುನೈನಾ ಗುತ್ತಿ ಉಪಸ್ಥಿತರಿದ್ದರು.
ರೋಟೆರಿಯನ್ ಸುರೇಶ ಚನಶೆಟ್ಟಿ ನಿರೂಪಿಸಿದರು. ರೋಟರಿ ಕ್ಲಬ್ ಆಫ್ ಬೀದರ್ ಅಧ್ಯಕ್ಷ ಪ್ರಕಾಶ ಟೊಣ್ಣೆ ಸ್ವಾಗತಿಸಿದರು.
ರೋಟರಿ ಕ್ಲಬ್ ಆಫ್ ಬೀದರ್ ಫೋರ್ಟ್ ಅಧ್ಯಕ್ಷ ಪ್ರೊ. ಎಸ್.ಬಿ. ಚಿಟ್ಟಾ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.