ಬೀದರ್: ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ ಸಾರ್ವಜನಿಕರು ಲಿಖಿತವಾಗಿ ಬರೆದು ಕಚೇರಿಯಲ್ಲಿ ಅಳವಡಿಸಿರುವ ಕುಂದುಕೊರತೆ ಪಟ್ಟಿಯಲ್ಲಿ ಹಾಕಬೇಕು ಎಂದು ಬೀದರ್ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ ತಿಳಿಸಿದ್ದಾರೆ.

ಈಚೆಗೆ ಅಧಿಕಾರ ವಹಿಸಿಕೊಂಡಿರುವ ಅವರು, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವುದು ಇಲಾಖೆಯ ಉದ್ದೇಶವಾಗಿದೆ. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರ ಮಾರ್ಗದರ್ಶನದಲ್ಲಿ ಕಚೇರಿಯಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಪ್ರತಿ ಶನಿವಾರ ದೂರು ಪೆಟ್ಟಿಗೆಯಲ್ಲಿನ ದೂರುಗಳನ್ನು ಪರಿಶೀಲಿಸಿ ಅವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಾರ್ವಜನಿಕರ ಸುರಕ್ಷತೆಯೇ ಇಲಾಖೆಯ ಗುರಿಯಾಗಿದೆ. ತುರ್ತು ಸಂದರ್ಭದಲ್ಲಿ ಮೊಬೈಲ್ ಸಂಖ್ಯೆ– 9449864038ಗೆ ಸಂಪರ್ಕಿಸಿ ಮಾಹಿತಿ ಕೊಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮೊದಲ ಹಂತದಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ದಿಸೆಯಲ್ಲಿ ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಎರಡನೇ ಹಂತದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮೂರನೇ ಹಂತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.