ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಗೀತ, ನೃತ್ಯದಿಂದ ಏಕಾಗ್ರತೆ

ಪ್ರೊಬೇಷನರಿ ಐಎಎಸ್ ಅಧಿಕಾರಿ ಕೀರ್ತನಾ ಅಭಿಮತ
Last Updated 2 ನವೆಂಬರ್ 2021, 15:46 IST
ಅಕ್ಷರ ಗಾತ್ರ

ಬೀದರ್: ‘ಕಲೆಯಲ್ಲಿ ಅದ್ಭುತ ಶಕ್ತಿ ಇದೆ. ಮಕ್ಕಳ ಬುದ್ಧಿಶಕ್ತಿ ಹಾಗೂ ಏಕಾಗ್ರತೆ ವೃದ್ಧಿಸಲು ಸಂಗೀತ ಹಾಗೂ ನೃತ್ಯ ನೆರವಾಗುತ್ತದೆ’ ಎಂದು ಪ್ರೊಬೇಷನರಿ ಐಎಎಸ್ ಅಧಿಕಾರಿ ಕೀರ್ತನಾ ಎಚ್.ಎಸ್ ಅಭಿಪ್ರಾಯಪಟ್ಟರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ನಾಟ್ಯಶ್ರೀ ನೃತ್ಯಾಲಯ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಲಾ ಸಂಭ್ರಮೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ನಾಟ್ಯದಿಂದ ಮಕ್ಕಳಲ್ಲಿ ಧೈರ್ಯ, ಆತ್ಮವಿಶ್ವಾಸ ಹೆಚ್ಚುತ್ತದೆ. ಸಂಕೋಚ ಕಡಿಮೆಯಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಿದೆ’ ಎಂದು ಹೇಳಿದರು.

‘ನಾಟ್ಯಶಾಸ್ತ್ರದ ಮೂಲ ಪದ ನಟ, ನಟ ಅಂದರೆ ನಾನು ಅಲ್ಲದೆ ಇರುವುದನ್ನು ಬಿಂಬಿಸುವುದು, ನಾಟ್ಯ ಒಂದು ದೊಡ್ಡ ಕಲೆಯಾಗಿದೆ. ಅಭಿವ್ಯಕ್ತಿಯ ಸಂಕೇತವಾಗಿದೆ’ ಎಂದು ತಿಳಿಸಿದರು.

ನಾಟ್ಯಶ್ರೀ ನೃತ್ಯಾಲಯ ನೀಡುವ 2020-21ನೇ ಸಾಲಿನ ನಾಟ್ಯಶ್ರೀ ಪ್ರಶಸ್ತಿಯನ್ನು ಕಲಬುರಗಿಯ ಭರತ ನಾಟ್ಯ ಕಲಾವಿದ ವರ್ಣ ಸಿಂಧು ನೃತ್ಯಕಲಾ ಕೇಂದ್ರದ ನಿರ್ದೇಶಕ ಅನಂತ ಕೆ, ಚಿಂಚನಸೂರ ಅವರಿಗೆ ಪ್ರದಾನ ಮಾಡಲಾಯಿತು.

ಬಸವ ಸೇವಾ ಪ್ರತಿಷ್ಠಾನದ ಗಂಗಾಬಿಕೆ ಅಕ್ಕ ಸಾನ್ನಿಧ್ಯ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಮಾಸಿಮಾಡೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ನಾಟ್ಯ ಶ್ರೀ ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ ಇದ್ದರು.

ಆಯ್ಕೆ ಸಮಿತಿ ಸದಸ್ಯ ವೀರಶೆಟ್ಟಿ ಮೈಲೂರ್‌ಕರ್ ಪ್ರಶಸ್ತಿ ಹಾಗೂ ಪುರಸ್ಕೃತರ ಪರಿಚಯ ಮಾಡಿದರು. ಕೆ.ಸತ್ಯಮೂರ್ತಿ ಸ್ವಾಗತಿಸಿದರು. ನಾಟ್ಯಶ್ರೀ ನೃತ್ಯಾಲಯದ ಪುಟಾಣಿ ಕಲಾವಿದರು ಹಚ್ಚೇವು ಕನ್ನಡದ ದೀಪದ ಮೂಲಕ ಸ್ವಾಗತ ನೃತ್ಯಗೈದರು. ಬಸವರಾಜ ಮೂಲಗೆ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT