ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಸಿಲಿಂಡರ್ ಬೆಲೆ ಏರಿಕೆಗೆ ಖಂಡನೆ

Last Updated 3 ಜುಲೈ 2021, 15:07 IST
ಅಕ್ಷರ ಗಾತ್ರ

ಬೀದರ್: ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಿರುವುದನ್ನು ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷೆ ತಲತ್ ಯಾಸ್ಮಿನ್ ಖಂಡಿಸಿದ್ದಾರೆ.

‘ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಪ್ರಧಾನಿ ಮೋದಿ ಅವರಿಗೆ ಮಾನವೀಯತೆ ಇಲ್ಲವೆ’ ಎಂದು ಪ್ರಶ್ನಿಸಿರುವ ಅವರು, ‘ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮಹಿಳೆಯರು ಸೌದೆಯಿಂದ ಒಲೆ ಹಚ್ಚಿ ಅಡುಗೆ ಮಾಡಬೇಕಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘₹797 ಇದ್ದ ಪ್ರತಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ₹822ಕ್ಕೆ ಹೆಚ್ಚಿಸಲಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ₹96 ಏರಿಕೆ ಮಾಡಲಾಗಿದೆ. ಇದರಿಂದ ಬಡ ಕುಟುಂಬಗಳು ಮತ್ತಷ್ಟು ಆರ್ಥಿಕ ಹೊರೆ ಅನುಭವಿಸಬೇಕಾಗುತ್ತಿದೆ’ ಎಂದು ಹೇಳಿದ್ದಾರೆ.

‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ದಿನೇದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಬಡವರ ಬದುಕು ಬೀದಿಗೆ ತಂದು ನಿಲ್ಲಿಸಿದೆ. ಬಿಜೆಪಿಗೆ ಮತ ಹಾಕಿದ್ದಕ್ಕೆ ಜನ ಪಶ್ಚಾತಾಪ ಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

‘ಮೋದಿ ಅವರು ಸಾಮಾನ್ಯ ಜನರ ಬದಲು ಶ್ರೀಮಂತರ ಪರ ನಿಂತಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಸಿ ಬಡವರ ಸಮಸ್ಯೆಗೆ ಸ್ಪಂದಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT