ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವೈಫಲ್ಯ ಖಂಡಿಸಿ ಕಾಂಗ್ರೆಸ್ ಧರಣಿ

ರಾಜ್ಯದ ನೆರೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಿ
Last Updated 12 ಸೆಪ್ಟೆಂಬರ್ 2019, 14:21 IST
ಅಕ್ಷರ ಗಾತ್ರ

ಬೀದರ್: ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನೆರೆಯಿಂದಾಗಿ ಜನ ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಆದರೆ, ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ನೆರವಿಗೆ ಧಾವಿಸಿಲ್ಲ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು ದೂರಿದರು.

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಿ, ಪುನರ್ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರಧಾನಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಚಂದ್ರಾಸಿಂಗ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಅಫ್ರೋಜ್‌ಖಾನ್‌, ಮಾಜಿ ಸದಸ್ಯರಾದ ಅಮೃತರಾವ್ ಚಿಮಕೋಡೆ, ಶಿವರಾಜ ಹಾಸನಕರ್, ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಕಾರ್ಯದರ್ಶಿ ಪರ್ವೇಜ್ ಕಮಲ್, ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಸಂಚಾಲಕ ಅಜಮತ್ ಪಟೇಲ್, ಬಿಡಿಎ ಮಾಜಿ ಅಧ್ಯಕ್ಷ ಸಂಜಯ ಜಾಗೀರದಾರ್, ಶಂಕರ ದೊಡ್ಡಿ, ಇರ್ಷಾದ್ ಅಲಿ ಪೈಲ್ವಾನ್, ನಯೀಮ್ ಕಿರ್ಮಾನಿ, ಅಶೋಕ ಸೋನಜಿ, ಭಗವಾನರಾವ್ ಪಾಂಡ್ರೆ, ಶಾಂತಕುಮಾರ ಮುದಾಳೆ, ಬಶೀರೊದ್ದಿನ್ ಹಾಲಹಿಪ್ಪರ್ಗಾ, ರೋಹಿದಾಸ ಘೋಡೆ, ಸಂಜುಕುಮಾರ ಡಿ.ಕೆ., ಅಬ್ದುಲ್ ಮನ್ನಾನ್ ಸೇಠ್, ಚಂದ್ರಕಾಂತ ಹಿಪ್ಪಳಗಾಂವ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT