ಭಾಲ್ಕಿ: ಬೀದರ್ ಪಾಪನಾಶ ದೇಗುಲದ ಅಭಿವೃದ್ಧಿ ಕಾಮಗಾರಿ ಕುರಿತು ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ನೀಡಿರುವ ಹೇಳಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಬಗ್ಗೆ ಬಳಸಿರುವ ಪದವನ್ನು ತಾಲ್ಲೂಕು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಖಂಡಿಸಿದ್ದಾರೆ.

‘ಪಾಪನಾಶವು ಸಾವಿರಾರು ಭಕ್ತರ ಭಕ್ತಿ, ನಂಬಿಕೆ ಹಾಗೂ ಸಂಸ್ಕೃತಿಯ ಪ್ರತೀಕ. ಇಂತಹ ಪವಿತ್ರ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಮಾತನಾಡುವುದು ಜಿಲ್ಲೆಯ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ. ಜನಪ್ರತಿನಿಧಿಯಾಗಿ ಹಾಗೂ ಕೇಂದ್ರ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಯಿಂದ ಇಂತಹ ಅಸಭ್ಯ ಭಾಷೆ ನಿರೀಕ್ಷಿಸಲ್ಪಡುವುದಿಲ್ಲ’ ಎಂದಿದ್ದಾರೆ.

‘ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾದರೂ, ವ್ಯಕ್ತಿಗತ ನಿಂದನೆ ಮತ್ತು ಅಸಭ್ಯ ಪದಗಳ ಬಳಕೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ಹೇಳಿಕೆಗಳು ವೈಯಕ್ತಿಕ ಅಥವಾ ಆ ಪಕ್ಷದ ರಾಜಕೀಯ ಸಂಸ್ಕೃತಿಯ ಪ್ರತಿಫಲನವೋ ಎಂಬುದನ್ನು ಭಾರತೀಯ ಜನತಾ ಪಕ್ಷ ಸ್ಪಷ್ಟ ಪಡಿಸಬೇಕು’ ಎಂದು ಮುಖಂಡರಾದ ಗಜಾನಂದ ಮೊಳಕೀರೆ, ಪ್ರವೀಣ ಸ್ವಾಮಿ, ಶಿವಕುಮಾರ ರಾಜಭವನ, ದೀಲಿಪ್ ಪಾಟೀಲ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.