ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | ಮಾದಿಗರಿಗೆ ಸ್ಥಾನಮಾನ ಕೊಟ್ಟಿದ್ದೆ ಕಾಂಗ್ರೆಸ್‌: ಯುವರಾಜ ಭೆಂಡೆ

Published 6 ಮಾರ್ಚ್ 2024, 16:13 IST
Last Updated 6 ಮಾರ್ಚ್ 2024, 16:13 IST
ಅಕ್ಷರ ಗಾತ್ರ

ಬೀದರ್‌: ‘ಮಾದಿಗ ಸಮುದಾಯದವರಿಗೆ ರಾಜಕೀಯ ಸ್ಥಾನಮಾನ ಕೊಟ್ಟಿದ್ದೆ ಕಾಂಗ್ರೆಸ್‌ ಪಕ್ಷ. ಈಗಲೂ ಕೊಡುತ್ತ ಬಂದಿದೆ. ಕಾಂಗ್ರೆಸ್ಸಿನಿಂದಲೇ ಸಮುದಾಯದ ಅನೇಕರು ರಾಜಕೀಯವಾಗಿ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ’ ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ., ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಯುವರಾಜ ಭೆಂಡೆ ತಿಳಿಸಿದ್ದಾರೆ.

ಕಾಂಗ್ರೆಸ್ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಿದೆಯೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್‌ ಹಿಪ್ಪಳಗಾಂವ್‌ ನೀಡಿರುವ ಹೇಳಿಕೆ ಖಂಡನಾರ್ಹವಾದುದು. ಕಾಂಗ್ರೆಸ್ ಪಕ್ಷ ಮಾದಿಗ ಸಮುದಾಯದ ಏಳಿಗೆಗೆ ಶ್ರಮಿಸುತ್ತ ಬಂದಿದೆ. ಹೀಗಾಗಿ ಪಕ್ಷದಿಂದ ಸಮುದಾಯಕ್ಕೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗಮ, ಮಂಡಳಿಯಲ್ಲಿ ಸಮುದಾಯಕ್ಕೆ ಸ್ಥಾನ ಕಲ್ಪಿಸಿಲ್ಲ ಎನ್ನುವ ಆರೋಪದಲ್ಲಿ ಹುರುಳಿಲ್ಲ. ಮಾದಿಗ ಸಮುದಾಯಕ್ಕೆ ಸೇರಿದ ಬಳ್ಳಾರಿ ಜಿಲ್ಲೆಯ ಮುಂಡರಗಿ ನಾಗರಾಜ ಅವರನ್ನು ಬಾಬು ಜಗಜೀವನರಾಮ್‌ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಯಾವತ್ತೂ ಮಾದಿಗ ಸಮುದಾಯವನ್ನು ಕಡೆಗಣಿಸಿಲ್ಲ. ಸರ್ವ ಸಮುದಾಯಗಳನ್ನು ಜತೆಗೆ ತೆಗೆದುಕೊಂಡು ಹೋಗುವ ನಾಯಕರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT