ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌: ಧರ್ಮಸಿಂಗ್‌ ಅಳಿಯ ಬಂಡಾಯ

Last Updated 27 ಮಾರ್ಚ್ 2023, 19:10 IST
ಅಕ್ಷರ ಗಾತ್ರ

ಜನವಾಡ (ಬೀದರ್‌ ಜಿಲ್ಲೆ): ‘ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ. ಬೆಂಬಲಿಗರ ಒತ್ತಾಸೆ ಯಿಂದ ಕಣಕ್ಕಿಳಿಯುವೆ. ಎಷ್ಟೇ ಒತ್ತಡ ಬಂದರೂ ನಿರ್ಧಾರ ಬದಲಿಸಲ್ಲ’ ಎಂದು ಕಾಂಗ್ರೆಸ್ ಮುಖಂಡ ಚಂದ್ರಾ ಸಿಂಗ್ ತಿಳಿಸಿದರು.

ಬೀದರ್ ತಾಲ್ಲೂಕಿನ ಕಮಠಾಣ ಹೊರವಲಯದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ‘ಬೀದರ್ ದಕ್ಷಿಣ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ. ಕಾರ್ಯಕರ್ತರ ಏಳ್ಗೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧ’ ಎಂದರು.

‌‘ಮಾಜಿ ಮುಖ್ಯಮಂತ್ರಿ ದಿ.ಎನ್.ಧರ್ಮಸಿಂಗ್ ಅವರ ಅಳಿಯ ಎಂಬುದನ್ನೇ ನೆಪವಾಗಿಸಿಕೊಂಡು ನನಗೆ ಟಿಕೆಟ್ ನಿರಾಕರಿಸಲಾಗುತ್ತಿದೆ. ಅವರ ಅಳಿಯ ಎಂದು ಟಿಕೆಟ್ ಕೇಳುತ್ತಿಲ್ಲ. 12 ವರ್ಷ ಪಕ್ಷ ಸಂಘಟಿಸಿ ಟಿಕೆಟ್ ಕೇಳಿದ್ದೇನೆ. ಆದರೂ, ಕಾಂಗ್ರೆಸ್ ನಾಯಕರು ಟಿಕೆಟ್ ಮಾರಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದರು.

‘ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ. ಕೂರಲು, ನಿಲ್ಲಲು, ನಡೆದಾಡಲು ಆಗದ ಅಶೋಕ ಖೇಣಿ ಈ ಬಾರಿ 5 ಸಾವಿರ ಮತಗಳನ್ನೂ ಪಡೆಯುವುದಿಲ್ಲ. ಎರಡು ಬಾರಿ ಸಚಿವರಾಗಿ ಮತ್ತು ಮೂರು ಬಾರಿ ಶಾಸಕರಾಗಿ ಬಂಡೆಪ್ಪ ಕಾಶೆಂಪುರ ಏನು ಮಾಡಿದ್ದಾರೆ’ ಎಂದು ಅವರು ಪ್ರಶ್ನಿಸಿದರು.

‘ಕೋವಿಡ್ ಬಂದಾಗ ಬಂಡೆಪ್ಪ ಖಾಶೆಂಪುರ ಮನೆ ಬಿಟ್ಟು ಹೊರಬರಲಿಲ್ಲ. ಅಶೋಕ ಖೇಣಿ ಅಮೆರಿಕದ್ದಲ್ಲಿ ಇದ್ದರು. ಬಿಜೆಪಿ ಕೇವಲ ಆಶ್ವಾಸನೆ ನೀಡುತ್ತದೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಆಗುವವರು ಬ್ರೋಕರ್ ಆಗಿ ಕೆಲಸ ಮಾಡುತ್ತಾರೆ’ ಎಂದು ಅವರು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT