‘ಜಿಲ್ಲಾ ಕಾಂಗ್ರೆಸ್ ಸರಿಪಡಿಸಲು ಕೆಲಸ’
‘ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ಸರಿಪಡಿಸುವ ಕೆಲಸ ಮಾಡಲಾಗುವುದು. ಆದಷ್ಟು ಶೀಘ್ರದಲ್ಲಿಯೇ ಆ ಕೆಲಸ ಶುರುವಾಗುತ್ತದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ ಸೊರಕೆ ತಿಳಿಸಿದರು. ‘ಬಿಜೆಪಿ ಕೇಡರ್ ಹೊಂದಿರುವ ಪಕ್ಷ. ತಳಮಟ್ಟದಲ್ಲಿ ಪಕ್ಷದ ಸಂಘಟನೆ ಉತ್ತಮವಾಗಿದೆ. ಕಾಂಗ್ರೆಸ್ ಚುನಾವಣೆಗೆ ಸ್ಪರ್ಧಿಸುವ ಪಕ್ಷ ಎಂಬಂತಾಗಿದೆ. ಸಂಘಟನೆಯಲ್ಲಿ ಬದಲಾವಣೆ ತರುವುದಕ್ಕಾಗಿ ಕೆಲಸ ಮಾಡಲಾಗುತ್ತಿದೆ’ ಎಂದರು.