ಬೀದರ್: ಬೀದರ್ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಪಕ್ಷ ಅಧಿಕಾರದ ಗದ್ದುಗೆ ಮೇಲೆ ಕುಳಿತು ಎರಡು ವರ್ಷಗಳಾಗುತ್ತಿದೆ. ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೂ ಜಿಲ್ಲಾ ಕಾಂಗ್ರೆಸ್ನಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಆದರೆ, ಅದು ಒಳಗೊಳಗೆ ಇತ್ತು. ಈಗ ಅದು ಸ್ಫೋಟಗೊಂಡಿದೆ. ಅದಕ್ಕೆ ಸಾಕ್ಷಿ ಬೆಂಗಳೂರಿನಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ.

ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ರಾಜಶೇಖರ ಪಾಟೀಲ ಹುಮನಾಬಾದ್, ಮಾಜಿ ಶಾಸಕರಾದ ಅಶೋಕ ಖೇಣಿ, ಅರವಿಂದಕುಮಾರ ಅರಳಿ, ಕೆ.ಪುಂಡಲೀಕರಾವ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪ್ರದೀಪ್ ಕುಶನೂರ, ರಘುನಾಥರಾವ್ ಜಾಧವ್, ವಿದ್ಯಾಸಾಗರ ಸಿಂಧೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಸೇಠ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದತ್ತು ಮೂಲಗೆ, ಕೆಪಿಸಿಸಿ ಸಂಯೋಜಕ ಅಜಮತ್ ಪಟೇಲ್, ಮುಖಂಡರಾದ ಪಂಡಿತರಾವ್ ಚಿದ್ರಿ, ಧನರಾಜ ತಾಳಂಪಳ್ಳಿ, ವೈಜಿನಾಥ ಯನಾಗುಂದೆ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮೇಲೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಬೀದರ್ ಜಿಲ್ಲೆಯ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನೆಯ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದು ಸಭೆಯ ಟಿಪ್ಪಣಿ ಮಾಧ್ಯಮದವರೊಂದಿಗೆ ಹಂಚಿಕೊಳ್ಳಲಾಗಿದೆ. ಆದರೆ, ಜಿಲ್ಲೆಯಲ್ಲಿ ಪಕ್ಷಕ್ಕೆ ಸಂಬಂಧಿಸಿದ ಎಲ್ಲ ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳಲಾಗುತ್ತಿದೆ. ನಿಷ್ಠರಾದವರನ್ನು ಕಡೆಗಣಿಸುತ್ತಿರುವುದರ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎಂದು ಗೊತ್ತಾಗಿದೆ.

‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಸಂಸದ ಸಾಗರ್ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಅವರ ಮನಸ್ಸಿಗೆ ತೋಚಿದಂತೆ ವರ್ತಿಸುತ್ತಿದ್ದಾರೆ. ಯಾರ ಅಭಿಪ್ರಾಯ ಕೇಳದೆ ಎಲ್ಲ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದಾರೆ. ಸಚಿವ ಖಂಡ್ರೆಯವರಂತೂ ತಮಗೆ ಆಪ್ತರಾದವರಿಗೆ ಆಯಕಟ್ಟಿನ ಜಾಗಗಳಲ್ಲಿ ಕೂರಿಸುತ್ತಿದ್ದಾರೆ. ಪಕ್ಷದ ನಿಷ್ಠಾವಂತರನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಇದರಿಂದ ಪಕ್ಷದ ಮೇಲೆ ಪರಿಣಾಮ ಬೀರುತ್ತಿದ್ದು, ಇದರ ಬಗ್ಗೆ ಚರ್ಚಿಸಲಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಜಿಲ್ಲೆಯ ಪ್ರಮುಖ ಆಯಕಟ್ಟಿನ ಸ್ಥಾನಗಳಲ್ಲಿರುವ ಜಿಲ್ಲಾಮಟ್ಟದ ಅಧಿಕಾರಿಗಳು ಬಿಜೆಪಿ ಪಕ್ಷದ ಪರ ಒಲವು ಹೊಂದಿದ್ದಾರೆ. ಅವರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಕೆಲಸ ಮಾಡುವುದಿಲ್ಲ. ಆದರೆ, ಬಿಜೆಪಿಯವರ ಏನೇ ಕೆಲಸಗಳಿದ್ದರೂ ಮಾಡಿಕೊಡುತ್ತಾರೆ. ಕಾಂಗ್ರೆಸ್ ಸರ್ಕಾರವಿದ್ದರೂ ಈ ರೀತಿ ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡು ವರ್ಷಗಳಾದರೂ ನಿಷ್ಠಾವಂತರಿಗೆ ಯಾವುದೇ ರೀತಿಯ ಸ್ಥಾನಮಾನ ನೀಡಿಲ್ಲ. ಕೆಲವರು ಎರಡೆರಡು ಹುದ್ದೆಗಳನ್ನು ನಿಭಾಯಿಸುತ್ತಿದ್ದಾರೆ. ಸಚಿವರು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಮೊದಲ ಹಂತದಲ್ಲಿ ಸಭೆ ನಡೆಸಿ ಚರ್ಚಿಸಿದ್ದೇವೆ. ಬರುವ ದಿನಗಳಲ್ಲಿ ಇನ್ನೊಮ್ಮೆ ಸಭೆ ಸೇರಿ, ಪಕ್ಷದ ವರಿಷ್ಠರಿಗೆ ಎಲ್ಲ ವಿಷಯ ತಿಳಿಸಿ, ಸರಿಪಡಿಸಲು ಕೋರಲಾಗುವುದು. ಇಲ್ಲವಾದರೆ ಜಿಲ್ಲೆಯಲ್ಲಿ ಪಕ್ಷ ಅಸ್ತಿತ್ವ ಕಳೆದುಕೊಳ್ಳುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

- ‘ಸಭೆಯ ವಿಷಯ ಗೊತ್ತಾಗಿದೆ’

ಬೆಂಗಳೂರಿನಲ್ಲಿ ಸಭೆ ಸೇರಿ ಚರ್ಚಿಸಿರುವ ವಿಷಯ ಗಮನಕ್ಕೆ ತಂದಿದೆ. ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿ ಪ್ರಕ್ರಿಯೆ ಕಾರಣಾಂತರಗಳಿಂದ ಸ್ವಲ್ಪ ವಿಳಂಬವಾಗಿದೆ. ಇದರಿಂದ ಕೆಲವರಿಗೆ ಬೇಸರವಾಗಿದೆ. ಈ ಕುರಿತು ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ. ಈ ವಿಷಯವನ್ನು ಮೇಲಿನವರ ಗಮನಕ್ಕೆ ತಂದು ಸರಿಪಡಿಸಲಾಗುವುದು. ಸರ್ಕಾರ ಉದ್ದೇಶಪೂರ್ವಕವಾಗಿ ನೇಮಕಾತಿ ವಿಳಂಬ ಮಾಡುತ್ತಿಲ್ಲ. ಬೇರೆ ಬೇರೆ ರೀತಿಯ ಬೆಳವಣಿಗೆಗಳಿಂದ ಸ್ವಲ್ಪ ತಡವಾಗಿದೆಯಷ್ಟೇ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಎಐಸಿಸಿ ಕೆಪಿಸಿಸಿ ಅಧ್ಯಕ್ಷರಿಗೆ ದೂರು’

‘ಬೀದರ್ ಜಿಲ್ಲಾ ಕಾಂಗ್ರೆಸ್ನಲ್ಲಿ ಏನೆಲ್ಲಾ ಬೆಳವಣಿಗೆ ನಡೆಯುತ್ತಿದೆ. ಪಕ್ಷದ ಮುಖಂಡರು ಕಾರ್ಯಕರ್ತರನ್ನು ಯಾವ ರೀತಿ ನಡೆಸಿಕೊಳ್ಳಲಾಗುತ್ತಿದೆ ಎನ್ನುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೂರು ಸಲ್ಲಿಸಲಾಗುವುದು’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ‘ಅಧಿಕಾರ ಸಿಗುವ ತನಕ ಕಾರ್ಯಕರ್ತರು ಬೇಕು. ಅಧಿಕಾರ ಸಿಕ್ಕ ನಂತರ ಅವರನ್ನು ಮರೆತರೇ ಹೇಗೆ? ಕಾರ್ಯಕರ್ತರೇ ಪಕ್ಷದ ಜೀವಾಳ. ಅವರಿಲ್ಲದಿದ್ದರೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವೇ? ಅಧಿಕಾರದಲ್ಲಿರುವವರು ಇದನ್ನು ಅರ್ಥ ಮಾಡಿಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು. ನಿಷ್ಠಾವಂತರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಬೇಕೇ ಹೊರತು ತಮಗೆ ಬಹುಪರಾಕ್ ಹೇಳುವವರಿಗೆ ಅಧಿಕಾರ ಕೊಡಬಾರದು. ಮೊದಲ ಹಂತದಲ್ಲಿ ಸಭೆ ಸೇರಿ ಚರ್ಚಿಸಿದ್ದೇವೆ. ಶೀಘ್ರದಲ್ಲೇ ವರಿಷ್ಠರ ಗಮನಕ್ಕೆ ತಂದು ಸರಿಪಡಿಸುವಂತೆ ಕೋರಲಾಗುವುದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.