ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ: ಭಾರತಕ್ಕೆ ಕಾಂಗ್ರೆಸ್ ಕೊಡುಗೆ ಅನನ್ಯ

Last Updated 1 ಡಿಸೆಂಬರ್ 2021, 4:21 IST
ಅಕ್ಷರ ಗಾತ್ರ

ಭಾಲ್ಕಿ: ರಾಜ್ಯ ಮತ್ತು ದೇಶದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಕೊಡುಗೆ ಅನನ್ಯ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರ ಸಂಕೀರ್ಣದಲ್ಲಿ ಮಂಗಳವಾರ ನೂತನ ತಾಲ್ಲೂಕು ಕಾಂಗ್ರೆಸ್ ಸಮಿತಿಯ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿನ ಬಡತನ ನಿರ್ಮೂಲನೆ ಮತ್ತು ಜಾತೀಯತೆ ತೊಲಗಿಸಲು ಕಾಂಗ್ರೆಸ್‌ ಕೊಡುಗೆ ದೊಡ್ಡದಿದೆ. ಸ್ವಾತಂತ್ರ್ಯದ ಬಳಿಕ ಇದ್ದ 32 ಕೋಟಿ ಜನಸಂಖ್ಯೆಗೆ ಆಹಾರ ಒದಗಿಸಲು ಶಕ್ತವಾಗಿರಲಿಲ್ಲ. ಆದರೆ, ಇಂದು 135 ಕೋಟಿ ಜನರಿಗೆ ಆಹಾರ ಧಾನ್ಯ ಉತ್ಪಾದಿಸುವ ಶಕ್ತಿಶಾಲಿ ರಾಷ್ಟ್ರವಾಗಿದೆ. ಇದಕ್ಕೆ ಇಂದಿರಾ ಗಾಂಧಿ ಅವರ ಹಸಿರು ಕ್ರಾಂತಿಯೇ ಕಾರಣ ಎಂದರು.

ದಿವಂಗತ ರಾಜೀವ ಗಾಂಧಿ ಅವರು ತಂದಿರುವ ಆಫ್ಟಿಕಲ್ ಪೈಬರ್‌ನಿಂದ ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಸಾಕ್ಷರತಾ ಹೆಚ್ಚಳ, ರೈಲ್ವೆ, ವಿಮಾನಯಾನ, ವಿದ್ಯುತ್ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ. ಆದರೆ, ವಿರೋಧಿಗಳು ದೇಶಕ್ಕೆ ಕಾಂಗ್ರೆಸ್‌ನ ಕೊಡುಗೆ ಏನು ಇಲ್ಲ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ. ದೇಶಕ್ಕೆ ಬಿಜೆಪಿ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಏಳೆಂಟು ವರ್ಷಗಳಲ್ಲಿ ದೇಶದಲ್ಲಿ ಬಿಜೆಪಿ ಉದ್ಯಮಪತಿಗಳ ಸರ್ಕಾರವಾಗಿ ಮಾರ್ಪಟ್ಟಿದೆ. ಮುಂಬರುವ ದಿನಗಳಲ್ಲಿ ಬಿಜೆಪಿಗೆ ಪಾಠ ಕಲಿಸಬೇಕು ಎಂದರು.

ಪಟ್ಟಣದಲ್ಲಿ ಕಾಂಗ್ರೆಸ್ ಕಚೇರಿ ತೆರೆಯಬೇಕು ಎನ್ನುವ ಕಾರ್ಯಕರ್ತರ ಬಹು ದಿನಗಳ ಬೇಡಿಕೆ ಈಡೇರಿದೆ. ಬರುವ ದಿನಗಳಲ್ಲಿ ಸ್ವಂತ ನಿವೇಶನ ಪಡೆದ ಸುಸಜ್ಜಿತ ಕಚೇರಿ ನಿರ್ಮಿಸಲಾಗುವುದು ಎಂದರು.

ಮಾಜಿ ಸಚಿವ ರಾಜಶೇಖರ ಪಾಟೀಲ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟೆ, ಶಾಸಕರಾದ ರಹೀಂಖಾನ್, ಅರವಿಂದ ಅರಳಿ, ಮಾಜಿ ಸಂಸದ ಶಿವರಾಮೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ್ ಮುಗನೂರ್, ದತ್ತು ಮೂಲಗೆ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಪ್ರಮುಖರಾದ ಬಸವರಾಜ ಬುಳ್ಳಾ, ವಿಠಲದಾಸ ಪ್ಯಾಗೆ, ಕೇಶವ ಮಹಾರಾಜ್, ಶಿವರಾಜ, ಹಣಮಂತರಾವ್ ಚವ್ಹಾಣ, ನಸೀರ್, ಟಿಂಕು ರಾಜಭವನ, ಜೈಪಾಲ ಬೋರಾಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT