ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರ, ಅಮಿತ್ ಶಾ ವಜಾಗೊಳಿಸಲು ಆಗ್ರಹ

ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
Last Updated 4 ನವೆಂಬರ್ 2019, 14:57 IST
ಅಕ್ಷರ ಗಾತ್ರ

ಬೀದರ್: ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.

ಬಿಜೆಪಿಯವರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡಿ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿರುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನಿರ್ದೇಶನದ ಮೇರೆಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ನ 17 ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರು ಮುಂಬೈನಲ್ಲಿ ತಂಗಿದ್ದು ಸೇರಿದಂತೆ ಎಲ್ಲ ವಿಚಾರಗಳನ್ನು ಶಾ ಅವರೇ ನೋಡಿಕೊಂಡಿದ್ದರು ಎನ್ನುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಯ ಆಡಿಯೊ ಬಿಡುಗಡೆಯಾಗಿದ್ದು, ಬಿಜೆಪಿಯ ಬಂಡವಾಳವನ್ನು ಬಯಲಾಗಿಸಿದೆ ಎಂದು ದೂರಿದರು.

ಬಿಜೆಪಿ ಅಧಿಕಾರಕ್ಕಾಗಿ ತತ್ವ, ಸಿದ್ಧಾಂತಗಳನ್ನು ಗಾಳಿಗೆ ತೋರಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳನ್ನು ಹಾಗೂ ಆ ಪಕ್ಷಗಳ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಪಾದಿಸಿದರು.

ರಾಷ್ಟ್ರಪತಿಯವರು ಕೂಡಲೇ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು. ಅಮಿತ್ ಶಾ ಅವರನ್ನು ಕೇಂದ್ರ ಗೃಹ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಆನಂದ ದೇವಪ್ಪ, ಮುಖಂಡರಾದ ರಾಜಶೇಖರ ಪಾಟೀಲ ಅಷ್ಟೂರ, ಸಂಜಯ ಜಾಗೀರದಾರ್, ರೋಹಿದಾಸ್ ಘೋಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಕಾಂತ ಹಿಪ್ಪಳಗಾಂವ್, ಚಂದ್ರಶೇಖರ ಚನಶೆಟ್ಟಿ, ರುಕ್ಮಾರೆಡ್ಡಿ ಪಾಟೀಲ, ರಾಜಕುಮಾರ್ ಹಲಬುರ್ಗೆ, ಸಂಜುಕುಮಾರ ಡಿ.ಕೆ., ಅಬ್ದುಲ್ ಸತ್ತಾರ್, ನಿಸಾರ್ ಅಹಮ್ಮದ್, ಮಹಮೂದ್, ಕಿರ್ಮಾನಿ, ಜಾನ್ ವೆಸ್ಲಿ, ಅಶೋಕ ಚವಾಣ್, ಸುನೀಲ ಬಚ್ಚನ್, ನಾಗನಾಥ ಪಾಟೀಲ, ನಾಸೀರ್ ಖಾದ್ರಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT