ಬೀದರ್: ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ ಹುಮನಾಬಾದ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
.ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಎದುರು ಸೇರಿದ ಕಾರ್ಯಕರ್ತರು ಪ್ರಿಯಾಂಕ್ ಖರ್ಗೆ ಹಾಗೂ ಚಂದ್ರಶೇಖರ ಪಾಟೀಲ ಹುಮನಾಬಾದ್ ಪರ ಜಯಘೋಷ ಹಾಕಿದರು. ಇಬ್ಬರ ಭಾವಚಿತ್ರ ಹಿಡಿದುಕೊಂಡು ಘೋಷಣೆ ಕೂಗಿದರು.

ಮಾಜಿಸಚಿವ ರಾಜಶೇಖರ ಪಾಟೀಲ ಹುಮನಾಬಾದ್ ಬೆಂಬಲಿಗರು, ಹುಮನಾಬಾದ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
.ಸಚಿವ ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ಕೊಡಿ: ಅರುಣ್ ಕುಮಾರ್ .
ಹುಮನಾಬಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್ ಮಿಯ್ಯಾ ಮಾತನಾಡಿ, ಚಂದ್ರಶೇಖರ ಪಾಟೀಲ ಹುಮನಾಬಾದ್ ಅವರು ಸತತ ಎರಡು ಸಲ ಬಿಜೆಪಿಯನ್ನು ಸೋಲಿಸಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಬಹಳ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅನೇಕ ಕ್ಷೇತ್ರಗಳ ದನಿಯಾಗಿ ವಿಧಾನ ಪರಿಷತ್ತಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದಕಾರಣ ಹೈಕಮಾಂಡ್ ಇವರಿಗೆ ಸಚಿವ ಸ್ಥಾನ ನೀಡಬೇಕು. ಅದೇ ರೀತಿ ಮಾಜಿಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು. ಏಕೆಂದರೆ ಅವರು ಬಹಳ ಉತ್ತಮ ರೀತಿಯಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರಿಬ್ಬರಿಗೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಿದಂತಾಗುತ್ತದೆ. ಪಕ್ಷದ ಹೈಕಮಾಂಡ್ ಇದರ ಬಗ್ಗೆ ಗಮನ ಹರಿಸಬೇಕೆಂದು ಒತ್ತಾಯಿಸಿದರು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಆರ್. ಪಾಟೀಲ, ಮುಖಂಡರಾದ ಲಕ್ಷ್ಮಣರಾವ್ ಬುಳ್ಳಾ ಓಂಕಾರ ತುಂಬಾ, ಉಮೇಶ ಜಮಗಿ, ರೇವಣಸಿದ್ದಪ್ಪ ಪಾಟೀಲ, ಪ್ರಭು ತಾಳಮಡಗಿ, ಮಲ್ಲಿಕಾರ್ಜುನ ಮಹೇಂದ್ರಕರ್, ರುದ್ರಂ ಪಾಟೀಲ್, ಗಣೇಶ್ ಪಾಟೀಲ, ಶ್ರೀಮಂತ ಪಾಟೀಲ, ಮನೋಜ ಕೋಟಿಕರ್, ರೇವಪ್ಪಾ ಪಾಟೀಲ, ಶಿವರಾಜ ಗಂಗಶೆಟ್ಟಿ, ಮಲ್ಲಿಕಾರ್ಜುನ ಮಾಶೆಟ್ಟಿ, ಮಹೇಶ ಅಗಡಿ, ರಂಗಾರೆಡ್ಡಿ, ಮಹಾಂತಯ್ಯಾ ಸ್ವಾಮಿ, ಮಲ್ಲಿಕಾರ್ಜುನ ಪ್ರಭಾ, ಅಜಮತ್ ಪಟೇಲ್, ವಾಹೇದ್ ಬೇಗ್, ಶರಣು ಕಂದಗೂಶ, ಸಂಜು ವಡ್ಡನಕೇರಾ, ವೀರಪ್ಪ ಭೂತಾಳೆ ಮತ್ತಿತರರು ಇದ್ದರು.
.ಗದಗ | ಎಚ್.ಆಂಜನೇಯ, ಮುನಿಯಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.