ಕಾಂಗ್ರೆಸ್‌ನಿಂದ ಪ್ರತಿಭಟನಾ ರ‍್ಯಾಲಿ 6ಕ್ಕೆ

7

ಕಾಂಗ್ರೆಸ್‌ನಿಂದ ಪ್ರತಿಭಟನಾ ರ‍್ಯಾಲಿ 6ಕ್ಕೆ

Published:
Updated:

ಬೀದರ್‌: ಕೇಂದ್ರ ಸರ್ಕಾರದ ರಫೆಲ್ ಯುದ್ಧ ವಿಮಾನ ಖರೀದಿ ಹಗರಣವನ್ನು ಖಂಡಿಸಿ ಅ. 6 ರಂದು ಬೆಳಿಗ್ಗೆ 11 ಗಂಟೆಗೆ ಬೀದರ್‌ ನಗರದಲ್ಲಿ ಕಾಂಗ್ರೆಸ್ ಪ್ರತಿಭಟನಾ ರ‍್ಯಾಲಿ ನಡೆಸಲಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವ ವಹಿಸಲಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವ ರಾಜಶೇಖರ ಪಾಟೀಲ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪಕ್ಷದ ಶಾಸಕರಾದ ರಹೀಂಖಾನ್, ಬಿ. ನಾರಾಯಣರಾವ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ ಭಾಗವಹಿಸಲಿದ್ದಾರೆ.

ಬಸವೇಶ್ವರ ವೃತ್ತದಿಂದ ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‌್ಯಾಲಿ ನಡೆಯಲಿದೆ .

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !