ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: 10 ಕಡೆಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ತೀವ್ರ ಖಂಡನೆ
Last Updated 11 ಜೂನ್ 2021, 11:34 IST
ಅಕ್ಷರ ಗಾತ್ರ

ಬೀದರ್: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷವು ಶುಕ್ರವಾರ ‘100 ನಾಟೌಟ್’ ಘೋಷವಾಕ್ಯದಡಿ ನಗರದ ಹತ್ತು ಕಡೆ ಪೆಟ್ರೋಲ್ ಬಂಕ್‍ಗಳ ಎದುರು ಪ್ರತಿಭಟನೆ ನಡೆಸಿತು.

ಅಂಬೇಡ್ಕರ್ ವೃತ್ತ ಸಮೀಪದ ಪೆಟ್ರೋಲ್ ಬಂಕ್ ಹತ್ತಿರ ಕಾಂಗ್ರೆಸ್ ಜಿಲ್ಲಾ ಘಟಕ, ಮಹಾವೀರ ವೃತ್ತ ಹತ್ತಿರದ ಪೆಟ್ರೋಲ್ ಬಂಕ್ ಬಳಿ ಯುವ ಘಟಕ, ಬಸವೇಶ್ವರ ವೃತ್ತ ಸಮೀಪದ ಪೆಟ್ರೋಲ್ ಬಂಕ್ ಸಮೀಪ ಅಲ್ಪಸಂಖ್ಯಾತರ ಘಟಕ, ಶಿವನಗರದ ಪೆಟ್ರೋಲ್ ಬಂಕ್ ಬಳಿ ಮಹಿಳಾ ಘಟಕ, ಕೇಂದ್ರ ಬಸ್ ನಿಲ್ದಾಣ ಸಮೀಪ ಹಿಂದುಳಿದ ವರ್ಗಗಳ ಘಟಕ, ಜನವಾಡ ರಸ್ತೆಯ ಪೆಟ್ರೋಲ್ ಬಂಕ್ ಹತ್ತಿರ ಪರಿಶಿಷ್ಟ ಜಾತಿ ಘಟಕ, ಮೈಲೂರ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಅಸಂಘಟಿತ ಕಾರ್ಮಿಕರ ಘಟಕ, ಓಲ್ಡ್‍ಸಿಟಿಯಲ್ಲಿ ನಗರ ಘಟಕ, ಬೊಮ್ಮಗೊಂಡೇಶ್ವರ ವೃತ್ತ ಸಮೀಪದ ಪೆಟ್ರೋಲ್ ಬಂಕ್ ಹತ್ತಿರ ವಿದ್ಯಾರ್ಥಿ ಘಟಕ ಹಾಗೂ ಹೈದರಾಬಾದ್ ರಸ್ತೆಯಲ್ಲಿ ಪದವೀಧರರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತಲೆ ಮೇಲೆ ಟೊಪ್ಪಿಗೆ ಧರಿಸಿದ್ದ ಕಾರ್ಯಕರ್ತರು, ಕೈಯಲ್ಲಿ ಪಕ್ಷದ ಧ್ವಜ ಹಾಗೂ ಫಲಕಗಳನ್ನು ಹಿಡಿದುಕೊಂಡಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಏರಿವೆ. ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಆರೋಪಿಸಿದರು.

13 ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್‌ಗೆ ₹ 25.72 ಹಾಗೂ ಡೀಸೆಲ್ ಬೆಲೆಯಲ್ಲಿ ₹ 23.93 ರಷ್ಟು ಹೆಚ್ಚಳ ಮಾಡಲಾಗಿದೆ. ಐದು ತಿಂಗಳಲ್ಲಿ 43 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಕೆಲ ಕಡೆ ಲೀಟರ್ ಬೆಲೆ ನೂರರ ಗಡಿ ದಾಟಿದ್ದರೆ, ಇನ್ನು ಕೆಲ ಕಡೆ ನೂರರ ಸನೀಹದಲ್ಲಿದೆ. ಇದು, ಸಾರ್ವಜನಿಕರ ಲೂಟಿಗೆ ಉದಾಹರಣೆಯಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಮಾತನಾಡಿದರು.

ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ಮುರಳಿಧರ ಎಕಲಾರಕರ್, ಅಮೃತರಾವ್ ಚಿಮಕೋಡೆ, ಎಂ.ಎ. ಸಮಿ, ಜಾರ್ಜ್ ಫರ್ನಾಂಡೀಸ್, ಶಂಕರರಾವ್ ದೊಡ್ಡಿ, ರೋಹಿದಾಸ್ ಘೋಡೆ, ಅಬ್ದುಲ್ ಮನ್ನಾನ್ ಸೇಠ್, ನಿಸಾರ್ ಅಹಮ್ಮದ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಫರೀದ್‍ಖಾನ್, ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಜರ್ ರೆಹಾನ್, ನಗರ ಘಟಕದ ಅಧ್ಯಕ್ಷ ಮಹಮ್ಮದ್ ಯುಸೂಫ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ, ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಗೋವರ್ಧನ ರಾಠೋಡ್, ಪದವೀಧರರ ಘಟಕದ ಅಧ್ಯಕ್ಷ ಜಾನ್ ವೆಸ್ಲಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ, ಲತಾ ರಾಠೋಡ್, ಸುಧಾಕರ ಕೊಳ್ಳೂರ, ಶಾಮರಾವ್ ಬಂಬಳಗಿ, ಮಿಸ್ಬಾ ಪಾಲ್ಗೊಂಡಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT