ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಮನಾಬಾದ್: ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Last Updated 6 ಅಕ್ಟೋಬರ್ 2021, 3:45 IST
ಅಕ್ಷರ ಗಾತ್ರ

ಹುಮನಾಬಾದ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಬಂಧನ ಖಂಡಿಸಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಲ್ಲಿಯ ಪ್ರಮುಖ ರಸ್ತೆಗಳ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಮಾತನಾಡಿ, ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಪ್ರಶ್ನೆ ಮಾಡುವವರನ್ನು ಹತ್ತಿಕ್ಕುವ ಕೆಲಸ ಮಾಡಲಾಗಿದೆ. ಇಂತಹ ಸರ್ಕಾರಗಳ ವಿರುದ್ದ ಧನಿ ಎತ್ತುವ ಕೆಲಸವಾಗಬೇಕು‌ ಎಂದರು.

ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಅಫ್ಸರ್ ಮಿಯ್ಯಾ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರ ಬಂಧನದ ಹಿಂದೆ ರಾಜಕೀಯ ಕುತಂತ್ರ ಅಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ,ರಾಜಕುಮಾರ್ ಇಟಗಿ, ದತ್ತು ಕುಮಾರ್ ಚಿದ್ರಿ, ಮಲ್ಲಿಕಾರ್ಜುನ ಮಾಶೆಟ್ಟಿ,ಸಿದ್ರಾಮ ವಾಘಮಾರೆ, ಉಮೇಶ್ ಜಮಗಿ, ರಾಹೀಲ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT