ಬೀದರ್: ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕವು ನಗರದಲ್ಲಿ ಗುರುವಾರ (ಆ.20) ಪ್ರತಿಭಟನೆ ನಡೆಸಲಿದೆ.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಗೆ ಶಿವನಗರದಲ್ಲಿ ಇರುವ ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಕೊರೊನಾ ನಿರ್ವಹಣೆ ಭ್ರಷ್ಟಾಚಾರ ಹಾಗೂ ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿನ ರಾಜ್ಯ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದ್ದಾರೆ.

ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.