ಬೀದರ್: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ವಿರೋಧ ಪಕ್ಷದವರನ್ನು ‘ಟ್ರ್ಯಾಪ್’ ಮಾಡುತ್ತಿದೆ. ‘ಮನಿ ಟ್ರ್ಯಾಪ್’, ‘ಹನಿ ಟ್ರ್ಯಾಪ್’ ಹಾಗೂ ‘ತೆರಿಗೆ ಟ್ರ್ಯಾಪ್’ನಲ್ಲೂ ತೊಡಗಿದೆ. ಟ್ರ್ಯಾಪ್ ರಾಜಕಾರಣ ಮಾಡುತ್ತಿದೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.

ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿದ ಅವರು, ‘ಇದಕ್ಕೆ ಯಾರಾದರೂ ಆಡಳಿತ ಅಂತಾರ? ರಾಜ್ಯದಲ್ಲಿ ಎಂದೂ ಈ ರೀತಿ ನಡೆದಿರಲಿಲ್ಲ. ಇದು ರಾಜ್ಯಕ್ಕೆ ಕಪ್ಪು ಚುಕ್ಕೆ. ದರಿದ್ರ ಕಾಂಗ್ರೆಸ್ ಸರ್ಕಾರದಿಂದ ಹೀಗಾಗಿದೆ’ ಎಂದು ದೂರಿದರು.

‘ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆರೋಗ್ಯ ಸರಿ ಇಲ್ಲ. ಜೆಡಿಎಸ್ಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ, ಅವರಿಗೆ ಕನ್ನಡಿಗರ ಆಶೀರ್ವಾದ ಇದೆ. ಅವರ ಆರೋಗ್ಯದ ಬಗ್ಗೆ ಕಾಂಗ್ರೆಸ್ಸಿಗರು ತಲೆಕೆಡಿಸಿಕೊಳ್ಳಬೇಕಿಲ್ಲ. ಜೆಡಿಎಸ್ ಪಕ್ಷವನ್ನು ಯಾವ ಕಾಂಗ್ರೆಸ್ಸಿಗರಿಂದ ಏನೂ ಮಾಡಲಿಕ್ಕೆ ಆಗುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.