ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿ.ಪಂ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಟಿಕೆಟ್‌: ಅಶೋಕ್‌ ಖೇಣಿ ಭರವಸೆ

Published : 27 ಆಗಸ್ಟ್ 2024, 15:45 IST
Last Updated : 27 ಆಗಸ್ಟ್ 2024, 15:45 IST
ಫಾಲೋ ಮಾಡಿ
Comments

ಬೀದರ್‌: ‘ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಮಾಜಿಶಾಸಕರೂ ಆದ ಕಾಂಗ್ರೆಸ್‌ ಮುಖಂಡ ಅಶೋಕ್‌ ಖೇಣಿ ಭರವಸೆ ನೀಡಿದರು.

ನಗರದ ರಾಂಪೂರೆ ಕಾಲೊನಿಯಲ್ಲಿ ಇತ್ತೀಚೆಗೆ ನಡೆದ ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರ ಅಹವಾಲು ಆಲಿಸಿ ಮಾತನಾಡಿದರು.

ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಬೇಕು. ಯಾವುದೇ ಕುಂದು ಕೊರತೆಗಳಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಬೇಕು. ಅವುಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು ಎಂದರು.

ಲೋಕಸಭೆ ಚುನಾವಣೆ, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾದುದು. ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರದಿಂದ ಸೋಲಾಗಿದೆ. ಆದರೆ, ಅದಕ್ಕೆ ಎದೆಗುಂದಬಾರದು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಚಂದ್ರಶೇಖರ್ ಚನಶೆಟ್ಟಿ, ಕರೀಂ ಸಾಬ್‌, ಮೂಂಚೂಣಿ ಘಟಕದ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT