ಮಂಗಳವಾರ, ಅಕ್ಟೋಬರ್ 26, 2021
21 °C

ಸಂವಿಧಾನ ಸದಾಶಯ: ವಿಚಾರ ಸಂಕಿರಣ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ರಾಷ್ಟ್ರ ಸೇವಾ ದಳದ ಜಿಲ್ಲಾ ಘಟಕ ಉದ್ಘಾಟನೆ, ಸಂವಿಧಾನ ಸದಾಶಯ ಮತ್ತು ಪ್ರಚಲಿತ ವಿದ್ಯಮಾನಗಳು ಕುರಿತ ವಿಚಾರ ಸಂಕಿರಣ ನಗರದ ಹೊಟೇಲ್ ಮಯೂರಾ ಬರೀದ್‍ಶಾಹಿಯಲ್ಲಿ ಭಾನುವಾರ (ಅ.10) ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಸಾಹಿತಿ ಚಂದ್ರಪ್ಪ ಹೆಬ್ಬಾಳಕರ್ ಅಧ್ಯಕ್ಷತೆ ವಹಿಸುವರು. ಬರೋಡಾದ ವಿಜ್ಞಾನಿ ಪ್ರೊ. ಸುರೇಖಾ ಜಿ. ದೇವಿ, ಬಾಲ ವಿಕಾಸ ಅಕಾಡೆಮಿಯ ಮಾಜಿ ಅಧ್ಯಕ್ಷ ಶಂಕರ ಹಲಗತ್ತಿ, ಹಿರಿಯ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಎಂ.ಎಸ್. ಮನೋಹರ, ಗುಂಡಪ್ಪ ಹುಡಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಸಂವಿಧಾನ ಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ ಗೋರನಾಳಕರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.