ಶುಕ್ರವಾರ, ಫೆಬ್ರವರಿ 26, 2021
19 °C
ಟೆಂಡರ್‌ನಲ್ಲಿ ನಿಯಮ ಉಲ್ಲಂಘನೆ:

ಜಿಲ್ಲಾಧಿಕಾರಿಗೆ ಗುತ್ತಿಗೆದಾರರ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೀದರ್‌: ಭಾಲ್ಕಿ ಹಾಗೂ ಹುಮನಾಬಾದ್ ಪುರಸಭೆ ವ್ಯಾಪ್ತಿಯ ನಗರೋತ್ಥಾನ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘ ಆರೋಪಿಸಿದೆ.

ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರಕುಮಾರ ಹಾಸನಕರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದಲ್ಲಿ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಅವರನ್ನು ಭೇಟಿ ಮಾಡಿ ಈ ಕುರಿತು ದೂರು ಸಲ್ಲಿಸಿದರು.

ನಗರೋತ್ಥಾನ ಯೋಜನೆ ಕಾಮಗಾರಿಯ ಒಟ್ಟು ಅನುದಾನದಲ್ಲಿ ಶೇ 24.10 ರಷ್ಟು ಅನುದಾನದ ಗುತ್ತಿಗೆಯನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಡಬೇಕು ಎನ್ನುವ ನಿಯಮ ಇದೆ. ಆದರೆ, ಎರಡೂ ಪುರಸಭೆಗಳಲ್ಲಿ ನಿಯಮ ಉಲ್ಲಂಘಿಸಿ ವಿವಿಧ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ಆಪಾದಿಸಿದರು.

ಈಗಾಗಲೇ ಕರೆಯಲಾದ ಟೆಂಡರ್‌ಗಳನ್ನು ತಡೆ ಹಿಡಿಯಬೇಕು. ಸರ್ಕಾರದ ನಿಯಮಾನುಸಾರ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅನುದಾನ ಮೀಸಲಿಟ್ಟು ಟೆಂಡರ್ ಕರೆಯಲು ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬುದ್ಧಪ್ರಕಾಶ ಭಾವಿಕಟ್ಟಿ, ಸದಸ್ಯರಾದ ಪ್ರಶಾಂತ ಸಾಗರ, ವಿಠ್ಠಲ ಪಾಂಡೆ, ರಾಜಕುಮಾರ ವಾಘಮಾರೆ, ಸಂಜುಕುಮಾರ ದೊಡ್ಡಮನಿ, ಪ್ರಥ್ವಿರಾಜ ನಿಟ್ಟೂರಕರ್, ಕಿರಣ, ಶಿವಮೂರ್ತಿ ನಿಯೋಗದಲ್ಲಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.