ಸೋಮವಾರ, ಸೆಪ್ಟೆಂಬರ್ 20, 2021
21 °C
ವಚನ ಸಾಹಿತ್ಯ ಅಕಾಡೆಮಿಯ ನಿರಹಂಕಾರ ಸಲಹೆ

ತಮ್ಮ ಕ್ಷೇತ್ರದಲ್ಲೇ ದೇಶಕ್ಕೆ ಏನನ್ನಾದರೂ ಕೊಡುಗೆ ನೀಡಿ: ನಿರಹಂಕಾರ ಬಂಡಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಯುವಕರು ತಮ್ಮ ತಮ್ಮ ಕ್ಷೇತ್ರಗಳಲ್ಲೇ ದೇಶಕ್ಕೆ ಏನನ್ನಾದರೂ ಕೊಡುಗೆ ನೀಡಬೇಕು ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯ ಜಿಲ್ಲಾ ಘಟಕದ ಅಧ್ಯಕ್ಷ ನಿರಹಂಕಾರ ಬಂಡಿ ಸಲಹೆ ಮಾಡಿದರು.

ನಗರದ ಲಾಡಗೇರಿ ಹಿರೇಮಠದಲ್ಲಿ ಚಂದ್ರಶೇಖರ ಆಜಾದ್ ಯುವ ಸಂಘ ಹಾಗೂ ಮಹರ್ಷಿ ವಾಲ್ಮೀಕಿ ಸೋಷಿಯಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ದೇಶ ಸೇವೆಯಲ್ಲಿ ಯುವಕರ ಪಾತ್ರ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ, ಡಾ. ಅಂಬೇಡ್ಕರ್, ಚಂದ್ರಶೇಖರ ಆಜಾದ್, ಸುಭಾಷ್‍ಚಂದ್ರ ಬೋಸ್, ಸ್ವಾಮಿ ವಿವೇಕಾನಂದರಂತಹ ಮಹಾನ್ ಪುರಷರ ಜೀವನ ಚರಿತ್ರೆ ಓದಬೇಕು. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಜಾತ್ಯತೀತ ಜನತಾ ದಳದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಜು ಕಡ್ಯಾಳ, ಚಂದ್ರಶೇಖರ ಆಜಾದ್ ಯುವ ಸಂಘದ ಅಧ್ಯಕ್ಷ ವಿಜಯಕುಮಾರ ಭಂಡೆ ಮಾತನಾಡಿದರು.

ಎ.ಪಿ.ಎಂ.ಸಿ ಅಧ್ಯಕ್ಷ ವಿಜಯಕುಮಾರ ಆನಂದೆ ಉದ್ಘಾಟಿಸಿದರು. ಗಂಗಾಧರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ಮಹರ್ಷಿ ವಾಲ್ಮೀಕಿ

ಸೋಷಿಯಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಸುನೀಲ್ ಭಾವಿಕಟ್ಟಿ, ದಾಬಕಾ ನಾಡ ತಹಶೀಲ್ದಾರ್ ಕಚೇರಿ ಉಪ ತಹಶೀಲ್ದಾರ್ ಸೋಮಶೇಖರ ನೀಲಪ್ಪನೋರ್, ಮುಖಂಡರಾದ ಬಂಡೆಪ್ಪ ಗಿರಿ, ಜಿ.ವಿನಯಕುಮಾರ, ಸತ್ಯಪ್ರಕಾಶ ಕೋಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು