ಶನಿವಾರ, ಮೇ 8, 2021
26 °C
75ನೇ ವರ್ಷದ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

ದೇಶದ ಅಭಿವೃದ್ಧಿಗೆ ಕೈಜೋಡಿಸಿ: ರಾಮಚಂದ್ರನ್ ಆರ್.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಷ್ಟೂರ್ (ಜನವಾಡ): ‘ಮಹಾನ್ ಹೋರಾಟಗಾರರ ತ್ಯಾಗ ಹಾಗೂ ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. 75ನೇ ವರ್ಷದ ಭಾರತ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಆತ್ಮಾವಲೋಕನ ಮಾಡಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕಿದೆ’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿದರು.

ಬೀದರ್ ತಾಲ್ಲೂಕಿನ ಅಷ್ಟೂರಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ 75ನೇ ವರ್ಷದ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದ ಭವಿಷ್ಯ ಯುವಪೀಳಿಗೆಯ ಮೇಲೆ ಅವಲಂಬಿಸಿದೆ. ದೇಶದ ಎಲ್ಲ ಕ್ಷೇತ್ರಗಳಲ್ಲೂ ಮಾನವ ಸಂಪನ್ಮೂಲವನ್ನು ಸದೃಢಗೊಳಿಸಬೇಕಿದೆ. ದೇಶದ ಸರ್ವಾಂಗೀಣ ಪ್ರಗತಿ ಹೊಂದುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿದರು. ವಿಮರ್ಶಕಿ ರಜಿಯಾ ಬಳಬಟ್ಟಿ ವಿಶೇಷ ಉಪನ್ಯಾಸ ನೀಡಿದರು. ಹಿರಿಯ ಜಾನಪದ ಕಲಾವಿದ ಶಂಕರ ಚೊಂಡಿ ದೇಶಭಕ್ತಿ ಗೀತೆಗಳನ್ನು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ.ನಾಡಗೇರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಅಧಿಕಾರಿ ಗವಿಸಿದ್ಧ ಹೊಸಮನಿ, ನೆಹರೂ ಯುವ ಕೇಂದ್ರದ ಅಧಿಕಾರಿ ಮಯೂರಕುಮಾರ ಗೊರಮೆ, ಉಪನ್ಯಾಸಕರಾದ ರಾಜಕುಮಾರ ಅಲ್ಲೂರೆ, ದಯಾನಂದ ಸ್ವಾಮಿ ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸ್ವಾಗತಿಸಿದರು. ಶಿಕ್ಷಕ ದೇವಿದಾಸ ಜೋಶಿ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು