ಪ್ರತಿಮೆಗೆ ಅವಮಾನ: ಆರೋಪಿಗೆ ಶಿಕ್ಷೆ

7

ಪ್ರತಿಮೆಗೆ ಅವಮಾನ: ಆರೋಪಿಗೆ ಶಿಕ್ಷೆ

Published:
Updated:

ಬೀದರ್: ಹುಮನಾಬಾದ್ ತಾಲ್ಲೂಕಿನ ಮಂಗಲಗಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಅವಮಾನ ಮಾಡಿದ ಆರೋಪಿಗೆ ಇಲ್ಲಿಯ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಲಯ ಗುರುವಾರ ಶಿಕ್ಷೆ ವಿಧಿಸಿದೆ.

ಮಂಗಲಗಿ ಗ್ರಾಮದ ಆರೋಪಿ ಮಹಮ್ಮದ್‌ ಅಹಮ್ಮದ್‌ ರೇಕುಳಗಿಗೆ ಆರು ತಿಂಗಳ ಶಿಕ್ಷೆ ಹಾಗೂ ₹ 3 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಎಂ.ಚಂದ್ರಶೇಖರ ರೆಡ್ಡಿ ತೀರ್ಪು ನೀಡಿದ್ದಾರೆ.

ಆರೋಪಿಯು 2016ರ ಏಪ್ರಿಲ್‌ 24 ರಂದು ಮನ್ನಾಎಖ್ಖೆಳ್ಳಿಯಲ್ಲಿ ಡಾ.ಅಂಬೇಡ್ಕರ್‌ ಪ್ರತಿಮೆಯ ಮುಂಭಾಗದ ಟೈಲ್ಸ್‌ಗಳನ್ನು ತೆಗೆದು ಅಲ್ಲಿದ್ದ ಲೈಟ್‌ಗಳನ್ನು ಒಡೆದು ಹಾಕಿದ್ದ. ಪ್ರತಿಮೆ ಬಳಿ ಚಪ್ಪಲಿ ಇಟ್ಟು ಅವಮಾನ ಮಾಡಿದ್ದ. ಮನ್ನಾಎಖ್ಖೆಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸರ್ಕಾರಿ ಹೆಚ್ಚುವರಿ ಅಭಿಯೋಜಕ ಭೀಮಾಶಂಕರ ಅಂಬಲಗಿ ವಾದ ಮಂಡಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !