ಭಾನುವಾರ, ಸೆಪ್ಟೆಂಬರ್ 19, 2021
31 °C

ಮಕ್ಕಳ ರಕ್ಷಣೆಗೆ ಸಹಕಾರ: ಸೂರ್ಯಕಾಂತ ಜೋಜನಾ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಮಕ್ಕಳ ರಕ್ಷಣೆ ಕಾರ್ಯಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಜೋಜನಾ ಭರವಸೆ ನೀಡಿದರು.

ಬೀದರ್ ತಾಲ್ಲೂಕಿನ ಚಿಕ್ಕಪೇಟೆಯ ಡಾನ್ ಬೊಸ್ಕೊ ಸಮಾಜ ಸೇವಾ ಸಂಸ್ಥೆಯಲ್ಲಿ ನಡೆದ ಸಹಭಾಗಿದಾರರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಡಾನ್ ಬೊಸ್ಕೊ ಸಂಸ್ಥೆ ಸಂಕಷ್ಟದಲ್ಲಿ ಇರುವ ಮಕ್ಕಳ ರಕ್ಷಣೆಯಲ್ಲಿ ತೊಡಗಿಸಿಕೊಂಡಿದೆ. ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ ಎಂದು ಶ್ಲಾಘಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಮಾತನಾಡಿ, ಕ್ರೀಮ್ ಯೋಜನೆಯು ಮಕ್ಕಳ ರಕ್ಷಣೆಗೆ ನಿರಂತರ ಶ್ರಮಿಸುತ್ತಿದೆ. ಮಕ್ಕಳ ಹಕ್ಕುಗಳ ಅರಿವು ಮೂಡಿಸುತ್ತಿದೆ. ಮಕ್ಕಳ ಹಕ್ಕುಗಳ ಸಮಿತಿ ರಚನೆಗೂ ಶಿಕ್ಷಣ ಇಲಾಖೆಗೆ ಸಹಕರಿಸುತ್ತಿದೆ ಎಂದು ತಿಳಿಸಿದರು.

ಡಾನ್ ಬೊಸ್ಕೊ ನಿರ್ದೇಶಕ ಫಾದರ್ ಜೇಮ್ಸ್ ಪೌಲ್, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ಶರತಕುಮಾರ ಅಭಿಮಾನ ಮಾತನಾಡಿದರು.

ಕ್ರೀಮ್ ಯೋಜನೆಯ ಜಿಲ್ಲಾ ಸಂಯೋಜಕ ಡ್ಯಾನಿಯಲ್ ಸಾಗರ್, ಮರಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಡೋಣೆ, ಸದಸ್ಯ ಸಂತೋಷ, ಸಿಆರ್‍ಪಿ ಎಂ.ಕೆ. ಪವರ್, ನೆಲ್ಸನ್ ರಾಚೆ, ಸೂರ್ಯಕಾಂತ, ಸುನೀಲ್ ಔರಾದ್, ರವಿ ಹುಮನಾಬಾದ್ ಇದ್ದರು.

ಸೀಮಪ್ಪ ಬಿ. ಸರಕುರೆ ಸ್ವಾಗತಿಸಿದರು. ರವಿಕುಮಾರ ನಡುವಿನದೊಡ್ಡಿ ನಿರೂಪಿಸಿದರು. ಡ್ಯಾನಿಯಲ್ ಮೇತ್ರೆ ವಂದಿಸಿದರು.

ಡಾನ್ ಬೊಸ್ಕೊ ಸಮಾಜ ಸೇವಾ ಸಂಸ್ಥೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಮಕ್ಕಳ ಹಕ್ಕುಗಳ ಶಿಕ್ಷಣ ಹಾಗೂ ಜಾಗೃತಿ ಆಂದೋಲನ ಯೋಜನೆ ಅಡಿಯಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.