ಸೋಮವಾರ, ಅಕ್ಟೋಬರ್ 18, 2021
23 °C

ಶೋಷಣೆಗೆ ಮುಕ್ತಿ ನೀಡಿದ ಸಹಕಾರ ಆಂದೋಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೀದರ್: ಸಹಕಾರ ಆಂದೋಲನವು ರೈತರನ್ನು ದೊಡ್ಡ ದೊಡ್ಡ ಭೂಮಾಲೀಕರ ಶೋಷಣೆಯಿಂದ ಮುಕ್ತಗೊಳಿಸಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜಯಕುಮಾರ ಎಸ್. ಪಾಟೀಲ ಗಾದಗಿ ಹೇಳಿದರು.

ನಗರದ ಪ್ರತಾಪನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಕೇಂದ್ರದಲ್ಲಿ ನಬಾರ್ಡ್ ಪ್ರಾಯೋಜಿತ್ವದಲ್ಲಿ ಆಯೋಜಿಸಿರುವ ಕಡೂರು ತಾಲ್ಲೂಕು ಸಹಕಾರ ಸಂಘಗಳ ಅಧ್ಯಕ್ಷರ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಸಂಘಗಳು ರೈತರಿಗೆ ಅವಶ್ಯಕ ಬಂಡವಾಳವನ್ನು ಸುಲಭವಾಗಿ ಒದಗಿಸುತ್ತಿವೆ. ಕೃಷಿ ಕ್ಷೇತ್ರವನ್ನು ಸ್ವಾವಲಂಬಿಯಾಗಿಸುವಲ್ಲಿ ಸಫಲವಾಗಿವೆ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ಪ್ರಯತ್ನದಿಂದಾಗಿ ಸಾಲ ಮನ್ನಾ ಯೋಜನೆಯಡಿ ಬೀದರ್ ಜಿಲ್ಲೆಯ 1.65 ಲಕ್ಷ ಸದಸ್ಯ ರೈತರ ರೂ. 527 ಕೋಟಿ ಸಾಲ ಮನ್ನಾ ಆಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಮಾತನಾಡಿ, ಸಹಕಾರ ಸಂಘಗಳು ಸಾಲದ ವ್ಯವಹಾರದ ಜತೆಗೆ ಮಾರಾಟ ಪ್ರಕ್ರಿಯೆಗಳನ್ನೂ ನಡೆಸುತ್ತಿವೆ. ನಾಫೆಡ್ ನೆರವಿನಿಂದ ಸಕ್ಕರೆ, ಚಹಾಪುಡಿ, ಎಣ್ಣೆ, ಸಾಬೂನು ತರಿಸಿಕೊಂಡು ಸಂಘಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಡೂರು ತಾಲ್ಲೂಕಿನ ಗಿರಿಯಾಪುರ ಸಹಕಾರ ಸಂಘದ ಅಧ್ಯಕ್ಷ ಚನ್ನಮಲ್ಲಿಕಾರ್ಜುನ, ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಯಡಮಲ್ಲೆ, ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಮಾತನಾಡಿದರು.

ಎಸ್.ಜಿ. ಪಾಟೀಲ, ಮಂಜುನಾಥ, ದಿವ್ಯ ಮತ್ತು ಮೇಘನಾ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು