ಬೀದರ್: ನಗರದ ಮೈಲೂರು ರಿಂಗ್ ರೋಡ್ ನಲ್ಲಿ ಹಲವು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದರೋಡೆಕೋರರ ಮೇಲೆ ಬುಧವಾರ ಪೊಲೀಸ್ ದಾಳಿ ಮಾಡಿದ ಇಲ ಈ ವೇಳೆ ಆರೋಪಿಗಳು ಮೊದಲು ಪೊಲೀಸರ ಮೇಲೆ ಬೈಕ್ ಹತ್ತಿ ಸಲು ನಂತರ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ.
ರಕ್ಷಣೆಗೆ ಸಿಪಿಐ ಯಾತನೂರ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ದಾರೆ.ಒಬ್ಬ ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ತಿಳಿಸಿದ್ದಾರೆ.
ಬೀದರ್ ಗ್ರಾಮೀಣ ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಪಿಎಸ್ಐ ನಾಗೇಂದ್ರ ಮತ್ತು ಸಿಬ್ಬಂದಿಯಿಂದ ಕಾರ್ಯಾಚರಣೆ ಭಾಗಿದ್ದರು. ಗಾಂಧಿ ಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.