ಗುರುವಾರ , ಜುಲೈ 29, 2021
23 °C

ಕೊರೊನಾ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಕೋವಿಡ್ -19 ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ.

ಜ್ವರದ ಕಾರಣ ಜೂನ್ 5 ರಂದು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ 26 ವರ್ಷದ ಯುವಕ ಜೂನ್ 15 ರಂದು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್- 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ.

12 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಬುಧವಾರ ಮತ್ತೆ 12 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ವೈರಾಣು ಪೀಡಿತರ ಸಂಖ್ಯೆ 395ಕ್ಕೆ ಏರಿದೆ.

ಮಹಾರಾಷ್ಟ್ರದಿಂದ ಮರಳಿದ 10 ಮಂದಿ ಹಾಗೂ ಸಂಪರ್ಕ ಮೂಲ ಪತ್ತೆಯಾಗದ ಇಬ್ಬರಿಗೆ ಸೋಂಕು ತಗುಲಿದೆ.
1, 11 ವರ್ಷದ ಬಾಲಕಿಯರು, 35, 28, 31 ವರ್ಷದ ಮಹಿಳೆಯರು, 4, 9, 10 ವರ್ಷದ ಬಾಲಕರು, 30, 26, 44, 30 ವರ್ಷದ ಪುರುಷರಿಗೆ ಸೋಂಕು ದೃಢಪಟ್ಟಿದೆ.

ಈವರೆಗೆ ಒಟ್ಟು 239 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗಳಿಗೆ ತೆರಳಿದ್ದಾರೆ. ಗಂಟಲು ದ್ರವ ಮಾದರಿ ಪಡೆದ 2,264 ಜನರ ವೈದ್ಯಕೀಯ ವರದಿ ಬರಬೇಕಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು