ಮಂಗಳವಾರ, ಜೂನ್ 2, 2020
27 °C
ಹೆಚ್ಚಿನ ನಿಗಾ ವಹಿಸಲು ಎಸಿ ಸೂಚನೆ

ಹುಮನಾಬಾದ್: ಇಬ್ಬರಿಗೆ ಕೊರೊನಾ ಪಾಸಿಟಿವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ನೆರೆಯ ಮಹಾರಾಷ್ಟ್ರದ ಸೋಲಾಪುರನಿಂದ ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣಕ್ಕೆ ಬಂದ 23 ವರ್ಷದ ಗರ್ಭಿಣಿಗೆ ಮತ್ತು ಇವರ ಎರಡು ವರ್ಷದ ಗಂಡು ಮಗುವಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಭಂವರಿಸಿಂಗ್‌ ಮೀನಾ ಅವರು ಶುಕ್ರವಾರ ಹಳ್ಳಿಖೇಡ (ಬಿ) ಪಟ್ಟಣಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಹಳ್ಳಿಖೇಡ (ಬಿ) ಪಟ್ಟಣದ ವಾರ್ಡ್-2ರ ಪಾಗಾಗಲ್ಲಿಯ ಮಹಿಳೆ ಮತ್ತು ಎರಡು ವರ್ಷದ ಮಗುವಿನಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಇವರು ವಾಸವಿರುವ ಬಡಾವಣೆಯ ಸೇರಿದಂತೆ ಇವರನ್ನು ಈರಿಸಲಾಗಿದ್ದ ಕ್ವಾರಂಟೈನ್ ಕೇಂದ್ರದ ಸುತ್ತಮುತ್ತಲಿನ ನೂರು ಮೀಟರ್ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಬಡಾವಣೆಯಲ್ಲಿ ಮುಖ್ಯರಸ್ತೆ ಸೀಲ್‌ಡೌನ್ ಮಾಡಿಸಿ ಪಟ್ಟಣದ ತುಂಬ ಫಾಗಿಂಗ್, ಬ್ಲಿಚಿಂಗ್ ಪೌಡರ್, ಸಿಂಪಡಿಸಿ ಪಟ್ಟಣದಲ್ಲಿ ಸ್ವಚ್ಛತೆ ಕೈಗೊಳ್ಳುವುದರ ಜತೆಗೆ ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಇಲ್ಲಿನ ಪಾಗಾ ಗಲ್ಲಿಯ ಮಹಿಳೆಯಲ್ಲಿ ಕೊರೊನಾ ದೃಢಪಟ್ಟಿರುವುದಿಂದ ಈ ಬಡಾವಣೆಯನ್ನು ಕಂಟೈನ್ಮೆಂಟ್‌ ಪ್ರದೇಶವಾಗಿ ಗುರುತಿಸಲಾಗಿದ್ದು , ಸರ್ಕಾರದ ಮಾರ್ಗಸೂಚಿಯಂತೆ ಕಂಟೈನ್ಮೆಂಟ್‌ ಪ್ರದೇಶದಲ್ಲಿ ಕೈಗೊಳ್ಳಬೇಕಾದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ಪತ್ತೆಯಾದ ಮಹಿಳೆಯ ಪ್ರಥಮ ಸಂಪರ್ಕದಲ್ಲಿದ್ದ ಮೂರು ಜನರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಇವರ ದ್ವಿತೀಯ ಸಂಪರ್ಕದಲ್ಲಿದ್ದ 34 ಜನರ ಗಂಟಲು ಮಾದರಿ ದ್ರವ ಪರೀಕ್ಷೆಗೆ ಕಳುಹಿಸಿ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ ಮೈಲಾರೆ, ಪುರಸಭೆ ಮುಖ್ಯಾಧಿಕಾರಿ ಎಂ.ಡಿ. ಯೂಸೂಫ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಶಾಂತ ಕನಕಟ್ಟ, ಪಿಎಸ್‍ಐ ಮಹಾಂತೇಶ ಲುಂಬಿ, ಅಂಗನವಾಡಿ ಮೇಲ್ವಿಚಾರಕಿ ಸೀಮಾ ಠಾಕುರ್, ಆರೋಗ್ಯ ಸಹಾಯಕರಾದ ಪ್ರಜ್ಞಾನಂದ, ವಿಲ್ಸನ್, ಸುಧಾರಾಣಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು