ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ | ಕೋವಿಡ್‌ ಸೋಂಕು ದೃಢ, ಹೆಚ್ಚಿದ ಭೀತಿ

Last Updated 20 ಮೇ 2020, 12:45 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಚಳಕಾಪೂರ ಗ್ರಾಮದ 56 ವರ್ಷ ವಯಸ್ಸಿನ ಚಿನ್ನದ ವ್ಯಾಪಾರಿಗೆ ಬುಧವಾರ ಕೋವಿಡ್-19 ಸೋಂಕು ದೃಢಪಟ್ಟಿದ್ದು, ತಾಲ್ಲೂಕಿನ ಜನರನ್ನು ಆತಂಕಕ್ಕೆ ಒಳಗಾಗಿದ್ದಾರೆ.

ಮಂಗಳವಾರ ಸಾರಿಗೆ ವಾಹನಗಳ ಸಂಚಾರ ಆರಂಭವಾಗಿದ್ದರಿಂದ ಜನ ಜೀವನ ಸಹಜತೆಯತ್ತ ತಿರುಗಿತ್ತು. ಇಲ್ಲಿಯವರೆಗೆ ತಾಲ್ಲೂಕಿನಲ್ಲಿ ಒಂದು ಕೋವಿಡ್-19 ಪಾಸಿಟಿವ್ ಬಂದಿಲ್ಲ ಎಂದು ಜನರು ನೆಮ್ಮದಿಯಿಂದ ಇದ್ದರು. ಈಗ ಎಲ್ಲೆಡೆ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.

ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ವ್ಯಕ್ತಿಯ ಟ್ರಾವೆಲ್ ಹಿಸ್ಟರಿ, ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕಿದ್ದಾರೆ. ಗ್ರಾಮದ ಹೊರವಲಯದ ಕಾಲೇಜಿನಲ್ಲಿ 8 ಜನರನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಿದ್ದಾರೆ. ಇಡೀ ಗ್ರಾಮವನ್ನು ಲಾಕ್‍ಡೌನ್ ಮಾಡಿ ಗ್ರಾಮದ ಮುಖ್ಯರಸ್ತೆಯ ಮೇಲೆ ಚೆಕ್‍ಪೋಸ್ಟ್ ನಿರ್ಮಿಸಿ ಪೊಲೀಸರು ಪಹರೆ ಕಾಯುತ್ತಿದ್ದಾರೆ. ಗ್ರಾಮದ ಜನರಿಗೆ ಅಗತ್ಯ ವಸ್ತುಗಳನ್ನು ಪ್ರತಿಯೊಂದು ಮನೆ-ಮನೆಗೆ ಸರಬರಾಜು ಮಾಡುವಂತೆ ಕಿರಾಣಿ ಅಂಗಡಿ ಮಾಲೀಕರಿಗೆ ಸೂಚಿಸಿದ್ದಾರೆ.

ತಾಲ್ಲೂಕು ಆರೋಗ್ಯ ಅಧಿಕಾರಿ ಜ್ಞಾನೇಶ್ವರ ನಿರಗುಡೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ನಾಯ್ಕರ್, ಸಿಪಿಐ ವಿಜಯಕುಮಾರ ಬಿರಾದರ, ಪಿಎಸ್‍ಐ ಹುಲೇಪ್ಪಾ, ಆರ್ ಐ.ಸಂಜುಕುಮಾರ, ವೈದ್ಯ ಹಿಬಾರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT