ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷೇಧಿತ ಪ್ರದೇಶದಲ್ಲಿ ಕಟ್ಟೆಚ್ಚರ

ಸಾರ್ವಜನಿಕರ ಮೇಲೆ ನಿಗಾ ಇಡಲು ವಿಶೇಷ ಅಧಿಕಾರಿಗಳ ನೇಮಕ
Last Updated 5 ಏಪ್ರಿಲ್ 2020, 16:09 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ 10 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಬೀದರ್‌ ಓಲ್ಡ್‌ಸಿಟಿ, ಬಸವಕಲ್ಯಾಣ ಹಾಗೂ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿಯ ಭೌಗೋಳಿಕ ಪ್ರದೇಶವನ್ನು ಜಿಲ್ಲಾಡಳಿತ ನಿಷೇಧಿತ ವಲಯ(ಕಂಟೈನ್ಮೆಂಟ್ ಝೋನ್) ಎಂದು ಘೋಷಿಸಿದೆ.

ಈ ಮೂರೂ ಪ್ರದೇಶಗಳಲ್ಲಿ ವಾಸವಾಗಿರುವ ನಿವಾಸಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಸೋಂಕು ತಗುಲಿದ ವ್ಯಕ್ತಿಗಳ ನಿವಾಸಗಳನ್ನು ಕೇಂದ್ರ ಬಿಂದುವಾಗಿ ಪರಿಗಣಿಸಿ ಭೌಗೋಳಿಕ ಪ್ರದೇಶವನ್ನು 3. ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶ (Containment Zone) ಹಾಗೂ ನಿಷೇಧಿತ ಪ್ರದೇಶದ ಹೊರಗಿನ 2 ಕಿ.ಮೀ. ವ್ಯಾಪ್ತಿಯನ್ನು (Buffer Zone) ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಘೋಷಣೆ ಮಾಡಿದ್ದಾರೆ.

ನಿಷೇಧಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಅಥವಾ ಜನರು ಕಾಲ್ನಡಿಗೆ, ಇನ್ಯಾವುದೋ ವಾಹನಗಳ ಮೂಲಕ ಒಳ ಪ್ರವೇಶಿಸುವುದು ಹಾಗೂ ನಿರ್ಗಮಿಸುವುದನ್ನು ನಿರ್ಬಂಧಿಸಲಾಗಿದೆ. ಎಲ್ಲರೂ ತಮ್ಮ ಮನೆಯಲ್ಲಿಯೇ ಇದ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಬೇಕು.

ಪ್ರತಿಯೊಬ್ಬರು ತಮ್ಮ ಗಲ್ಲಿಯಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ನಿಷೇಧಿತ ಪ್ರದೇಶಗಳ 3 ಕೀ.ಮೀ. ವ್ಯಾಪ್ತಿಯಲ್ಲಿ ಐದಕ್ಕೂ ಹೆಚ್ಚು ಜನರು ಗುಂಪು ಸೇರಬಾರದು. ಮೆರವಣಿಗೆ, ಸಭೆ, ಧಾರ್ಮಿಕ ಉತ್ಸವ, ಉರುಸ್, ಮದುವೆ, ಕ್ರೀಡೆ, ಸಂತೆ, ಜಾತ್ರೆ, ಸಮ್ಮೇಳನ, ನಾಟಕೋತ್ಸವ, ವಿಚಾರ ಗೋಷ್ಠಿ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಬಾರದು.

ನಿಷೇಧಿತ ಪ್ರದೇಶದಲ್ಲಿನ ಸರ್ಕಾರಿ, ಕಚೇರಿ, ದಿನಸಿ, ಹಾಲು, ಹಣ್ಣು, ತರಕಾರಿ ಮತ್ತು ಔಷಧಿ ಅಂಗಡಿಗಳು ಹೊರತುಪಡಿಸಿ ಎಲ್ಲ ಕಚೇರಿಗಳು, ಅಂಗಡಿ, ಮಳಿಗೆ, ದಾಸ್ತಾನು ಕೇಂದ್ರಗಳನ್ನು ಮುಚ್ಚಬೇಕು. ಆಗತ್ಯ ವಸ್ತುಗಳನ್ನು ಖರೀದಿಸುವ ಸ್ಥಳದಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯಗೊಳಿಸಿದೆ.

ಈ ಪ್ರದೇಶದಲ್ಲಿರುವ ನಿವಾಸಿಗಳು ಮನೆ ಬಿಟ್ಟು ಹೊರಗಡೆ ತಿರುಗಾಡುವಂತಿಲ್ಲ ಮತ್ತು ಇತರರ ಮನೆಗಳಿಗೂ ಹೋಗುವಂತಿಲ್ಲ. ಎಲ್ಲರೂ ಗೃಹ ನಿರ್ಬಂಧದಲ್ಲಿ ಇರಬೇಕು. ಆರೋಗ್ಯ ಇಲಾಖೆಯು ತಂಡಗಳನ್ನು ರಚಿಸಿಕೊಂಡು ಗ್ರಾಮದಲ್ಲಿ ವಾಸಿಸುತ್ತಿರುವ ಜನರ ಆರೋಗ್ಯ ಪರಿಶೀಲಿಸಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT