ಶುಕ್ರವಾರ, ಆಗಸ್ಟ್ 19, 2022
22 °C

ಕೋವಿಡ್: ಈಗ ದಿಡ್ಡಿ ಬಾಗಿಲು ಹಾಕಿದರೆ ಏನು ಪ್ರಯೋಜನ ಎಂದ ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ (ಬೀದರ್‌ ಜಿಲ್ಲೆ): ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿ ಏನು ಪ್ರಯೋಜನ? ಕೋವಿಡ್‌ ಹೆಚ್ಚಾಗಲು ರಾಜ್ಯ ಸರ್ಕಾರವೇ ಕಾರಣ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ. ಕೋವಿಡ್‌ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದೆ, ನಿಯಂತ್ರಣಕ್ಕೂ ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳದೆ ಸಭೆ ನಡೆಸಿ ಏನು ಉಪಯೋಗ’ ಎಂದು ಪ್ರಶ್ನಿಸಿದರು.

‘ವಾರದಿಂದ ಇಲ್ಲಿಯೇ ಠಿಕಾಣಿ ಹೂಡಿ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಪರ ಪ್ರಚಾರ ಕೈಗೊಂಡಿದ್ದೇನೆ. ಬಸವಣ್ಣನ ಕಾರ್ಯಕ್ಷೇತ್ರದಲ್ಲಿನ ಈ ಚುನಾವಣೆ 2023ರ ಚುನಾವಣೆಗೆ ದಿಕ್ಸೂಚಿ ಆಗಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು