ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳಲ್ಲೂ ಕೋವಿಡ್ ಜಾಗೃತಿ

Last Updated 23 ಏಪ್ರಿಲ್ 2021, 4:56 IST
ಅಕ್ಷರ ಗಾತ್ರ

ಔರಾದ್: ಕೋವಿಡ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗ್ರಾಮಗಳಲ್ಲೂ ಜಾಗೃತಿ ಮೂಡಿಸಲು ಸೂಚನೆ ನೀಡಲಾಗಿದೆ‌. ತಾಲ್ಲೂಕಿನ ಧುಪತಮಹಾಗಾಂವ್ ಪಿಡಿಒ ಶಿವಾನಂದ ಔರಾದೆ ಸ್ವತಃ ಧ್ವನಿವರ್ಧಕ ಹಿಡಿದು ತಿಳವಳಿಕೆ ಮೂಡಿಸುತ್ತಿದ್ದಾರೆ.

‘ಕೋವಿಡ್ ಸೋಂಕು ಬಹಳ ವೇಗವಾಗಿ ಹರಡುತ್ತಿದೆ. ತಮ್ಮ ಹಾಗೂ ತಮ್ಮ ಕುಟುಂಬದ ಹಿತದೃಷ್ಟಿಯಿಂದ ಕೋವಿಡ್ ನಿಯಮ ಪಾಲನೆ ಮಾಡಬೇಕು. ಈ ಸೋಂಕಿನಿಂದಾಗಿ ನಿಮ್ಮ ಅಕ್ಕಪಕ್ಕದ ಊರಿನಲ್ಲಿ ಕೆಲವರು ಜೀವ ಕಳೆದುಕೊಂಡಿದ್ದಾರೆ. ಅಂಥಹ ಪರಿಸ್ಥಿತಿ ಯಾರಿಗೂ ಬರಬಾರದು ಎಂದರೆ ನೀವು ಹೊರಗೆ ಬಂದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರೋಗ ಲಕ್ಷಣಗಳು ಕಂಡುಬಂದೆ ತಕ್ಷಣ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯ ಬೇಕು’ ಎಂದು ಸಲಹೆ ನೀಡಿದರು.

ಪಟ್ಟಣ ಪ್ರದೇಶದಲ್ಲಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT