ಮಂಗಳವಾರ, ಮಾರ್ಚ್ 21, 2023
20 °C

ಕೋವಿಡ್ ತಡೆ: ವೈದ್ಯರ ಸೇವೆ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ಮೊದಲ ಹಾಗೂ ಎರಡನೇ ಅಲೆಗಳನ್ನು ನಿಯಂತ್ರಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ ಎಂದು ಐಡಿಬಿಐ ಸ್ಥಳೀಯ ಶಾಖೆ ಸಹಾಯಕ ವ್ಯವಸ್ಥಾಪಕ ರೂಪೇಶ ನುಡಿದರು.

ಐಡಿಬಿಐ ಬ್ಯಾಂಕ್ ವತಿಯಿಂದ ನಗರದ ಗುಂಪಾದಲ್ಲಿ ಇರುವ ಎನ್.ಕೆ. ಜಾಬಶೆಟ್ಟಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಸ್ಪತ್ರೆಯ ಪ್ರಾಧ್ಯಾಪಕರು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಉಪ ಪ್ರಾಚಾರ್ಯ ಡಾ. ವಿಜಯಕುಮಾರ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಡಾ. ಸಿ. ಹಳ್ಳಿ, ಡಾ. ಸಂಜುಕುಮಾರ ಜ್ಯೋತೆಪ್ಪ, ಬಸಿರೊದ್ದಿನ್, ಮೊಹಮ್ಮದ್ ಇಕ್ರೊಮೊದ್ದಿನ್, ಡಾ. ಮಂಜುಳಾ, ಡಾ. ಸುರೇಖಾ ಬಿರಾದಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು