ಬೀದರ್: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ಎರಡನೇ ಅಲೆ ಆರಂಭದಲ್ಲಿ ಆತಂಕಕಾರಿ ರೀತಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಜಿಲ್ಲಾ ಆಡಳಿತದ ದಿಟ್ಟ ಕ್ರಮ ಹಾಗೂ ಜನರ ಸಹಕಾರದಿಂದ ಈಗ ಕೋವಿಡ್ ಹತೋಟಿಗೆ ಬರುತ್ತಿದೆ ಎಂದು ನಗರದಲ್ಲಿ ಗುರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸದ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ 774 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 350 ಸೇರಿದಂತೆ ಜಿಲ್ಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಸೋಂಕಿತರ ಸಂಖ್ಯೆ 1,124 ಇದೆ. 1,934 ಜನ ಹೋಂ ಐಸೋಲೇಷನ್‍ನಲ್ಲಿ ಇದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 3,061 ಆಗಿದೆ ಎಂದು ಹೇಳಿದರು.

ಕೋವಿಡ್ ಮರಣ ಪ್ರಮಾಣ ಕಡಿಮೆ ಇದೆ. ಒಂದೇ ದಿನ ಆಸ್ಪತ್ರೆಯಿಂದ 497 ಜನ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಮ್ಲಜನಕ, ವೆಂಟಿಲೇಟರ್, ಹಾಸಿಗೆ ಸೇರಿದಂತೆ ಯಾವುದೇ ಕೊರತೆ ಇಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.