ಬೀದರ್: ‘ಬೀದರ್ ರಾಜ್ಯದಲ್ಲೇ ಅತ್ಯಂತ ಕಡಿಮೆ ಕೋವಿಡ್-19 ಸಕ್ರಿಯ ಪ್ರಕರಣ ಇರುವ ಜಿಲ್ಲೆಯಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 396 ಸಕ್ರಿಯ ಪ್ರಕರಣಗಳು ಇವೆ. 207 ಜನ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 189 ಜನ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 1,12,411 ಜನರ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 1,05,608 ಮಂದಿಯ ವೈದ್ಯಕೀಯ ವರದಿ ನೆಗೆಟಿವ್ ಬಂದಿದೆ. 6,640 ಜನರ ವರದಿ ಪಾಸಿಟಿವ್ ಬಂದಿದೆ. ಶೇ 91.58 ರಷ್ಟು ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕೋವಿಡ್‍ನಿಂದ ಜಿಲ್ಲೆಯಲ್ಲಿ 159 ಜನ ಮೃತಪಟ್ಟಿದ್ದಾರೆ. ಮರಣ ದರ ಶೇ 2.4 ಹಾಗೂ ತೀರಾ ಇತ್ತೀಚಿನ ಮರಣ ದರ ಶೇ 0.6 ಆಗಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಪರಿಶ್ರಮದ ಫಲವಾಗಿ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.