ಕೋವಿಡ್ ಮೂರನೇ ಅಲೆ ಎದುರಿಸಲು ಸಜ್ಜಾಗಿ

ಬೀದರ್: ‘ಸಂಭಾವ್ಯ ಕೊರೊನಾ ಮೂರನೇ ಅಲೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಬೇಕು’ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
‘ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕು. 3ನೇ ಅಲೆಯ ಸಂದರ್ಭದಲ್ಲಿ ಗರ್ಭಿಣಿಯರು ಮತ್ತು ಮಕ್ಕಳು ಸೋಂಕಿಗೆ ಹೆಚ್ಚಾಗಿ ಒಳಗಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
‘ಈಗಾಗಲೇ ಚಾಲ್ತಿಯಲ್ಲಿರುವ ಟೆಸ್ಟಿಂಗ್, ಟ್ರ್ಯಾಕಿಂಗ್ ಹಾಗೂ ಟ್ರೇಸಿಂಗ್‌ಗೆ ಸಂಬಂಧಿಸಿದ ಮಾನದಂಡಗಳನ್ನು ಮುಂದುವರಿಸಬೇಕು. ಐದು ಅಥವಾ 5ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶವನ್ನು ಕಂಟೈನಮೆಂಟ್ ವಲಯ ಎಂದು ಗುರುತಿಸಿ ಅಗತ್ಯ ಕ್ರಮ ವಹಿಸಬೇಕು’ ಎಂದರು.
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ತಹಶೀಲ್ದಾರ್ ಗಂಗಾದೇವಿ ಸಿ.ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ವಿ.ಜಿ.ರೆಡ್ಡಿ, ಡಿಎಸ್‍ಒ ಡಾ.ಕೃಷ್ಣಾ ರೆಡ್ಡಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.