ಗುರುವಾರ , ಜನವರಿ 21, 2021
22 °C

ಬೀದರ್ ಜಿಲ್ಲೆಯಲ್ಲಿ ಐದಕ್ಕೂ ಹೆಚ್ಚು ಶಿಕ್ಷಕರಿಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಐದಕ್ಕೂ ಹೆಚ್ಚು ಶಿಕ್ಷಕರು ಹಾಗೂ ಒಬ್ಬ ವಿದ್ಯಾರ್ಥಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ.

ಜನವರಿ 6ರಂದು ಬೀದರ್ ತಾಲ್ಲೂಕಿನ ರೇಕುಳಗಿಯ 10ನೇ ತರಗತಿ ವಿದ್ಯಾರ್ಥಿಯೊಬ್ಬರಿಗೆ ಕೋವಿಡ್‌ ಸೋಂಕು ದೃಡಪಟ್ಟಿದ್ದು, ವಿದ್ಯಾರ್ಥಿ ಹಾಗೂ ಅವರ ತಾಯಿ ಬ್ರಿಮ್ಸ್‌ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಸೆಂಬರ್ 30ರಂದು ಶಾಲೆಯಲ್ಲಿ ಕೆಲವರ ಗಂಟಲು ದ್ರವ ಮಾದರಿ ಪಡೆಯಲಾಗಿತ್ತು. ಎಲ್ಲರ ವೈದ್ಯಕಿಯ ವರದಿ ನೆಗೆಟಿವ್ ಬಂದಿತ್ತು. ಜನವರಿ 6ರಂದು ಮತ್ತೆ ಕೆಲವರ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಯಾವುದೇ ರೋಗ ಲಕ್ಷಣಗಳು ಕಂಡು ಬಾರದಿದ್ದರೂ ಒಬ್ಬ ವಿದ್ಯಾರ್ಥಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.

ಔರಾದ್ ತಾಲ್ಲೂಕಿನ ಬಾದಲಗಾಂವ್‌, ಚಾಂಡೇಶ್ವರ, ಭಾಲ್ಕಿ ತಾಲ್ಲೂಕಿನ ಪಾಂಡರಿ, ಹರಿವಾಡಿ, ಜಮಖಂಡಿ, ಬೀದರ್‌ ತಾಲ್ಲೂಕಿನ ಮಾಳೆಗಾಂವ, ಹುಮನಾಬಾದ್ ತಾಲ್ಲೂಕಿನ ಧುಮ್ಮಸೂರಿನಲ್ಲಿ ತಲಾ ಒಬ್ಬ ಶಿಕ್ಷಕರಿಗೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಆದರೆ, ಆರೋಗ್ಯ ಇಲಾಖೆ ಇನ್ನು ದೃಢಪಡಿಸಿಲ್ಲ.

ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಶಾಲೆಗಳಿಗೆ ಒಂದು ವಾರ ರಜೆ ನೀಡಲಾಗಿದೆ. ಕೆಲವು ಶಾಲೆಗಳಲ್ಲಿ ಮತ್ತೊಮ್ಮೆ ವಿದ್ಯಾರ್ಥಿಗಳ ಗಂಟಲು ಮಾದರಿ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.