ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 284ಕ್ಕೆ

ಒಂದೇ ದಿನ 5 ಮಂದಿಗೆ ವೈರಾಣು
Last Updated 10 ಜೂನ್ 2020, 16:02 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯಲ್ಲಿ ಬುಧವಾರ ನಾಲ್ವರು ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿ ಒಟ್ಟು ಐದು ಜನರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ವೈರಾಣು ಪೀಡಿತರ ಸಂಖ್ಯೆ 284ಕ್ಕೆ ಹೆಚ್ಚಳವಾಗಿದೆ.

ಮುಂಬೈನಿಂದ ಬಂದ 30, 35 ವರ್ಷದ ಮಹಿಳೆ ಹಾಗೂ 37 ವರ್ಷದ ವ್ಯಕ್ತಿಗೆ ಮತ್ತು ಸೋಂಕಿತರ ಸಂಪರ್ಕದಿಂದ 56 ಹಾಗೂ 32 ವರ್ಷದ ಮಹಿಳೆಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಔರಾದ್‌ನ ನಿವಾಸಿಯೊಬ್ಬರು ಕೋವಿಡ್‌ 19 ಸೋಂಕಿನಿಂದ ಮೃತಪಟ್ಟಿರುವ ಸಂಶಯ ಇದೆ. ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆರೋಗ್ಯ ಇಲಾಖೆಯ ಅಧಿಕಾರಿಗಳು ದೃಢಪಡಿಸಿಲ್ಲ.

ಜಿಲ್ಲಾ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿದ್ದ 19 ಜನ ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 151 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನೂ 4,978 ಜನರ ವೈದ್ಯಕೀಯ ವರದಿ ಬರಬೇಕಿದೆ.

ಆರೋಗ್ಯ ಇಲಾಖೆ ಸಿಬ್ಬಂದಿ ಕಂಟೇನ್ಮೆಂಟ್ ಪ್ರದೇಶದಲ್ಲಿರುವ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಐವರಿಗೆ ಜ್ವರ ಇರುವುದು ಕಂಡು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT