ಶನಿವಾರ, ಜೂನ್ 19, 2021
26 °C

ಕೋವಿಡ್‌ನಿಂದ ಉಪನ್ಯಾಸಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ಇಲ್ಲಿಯ ಎಂ.ಆರ್.ಎ. ಸ್ವತಂತ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚಂದ್ರಕಾಂತ ಮಹಾಗಾವೆ (59) ಭಾನುವಾರ ಕಲಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‍ಗೆ ಸಾವನ್ನಪ್ಪಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಚಂದ್ರಕಾಂತ ಅವರು ಕೋವಿಡ್ ದೃಢಪಟ್ಟಿದ್ದರಿಂದ ಭಾಲ್ಕಿ ಮತ್ತು ಕಲಬುರ್ಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ.

ತಾಲ್ಲೂಕಿನ ಸ್ವಗ್ರಾಮ ಲಾಧಾದಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.