ಗುರುವಾರ , ಜನವರಿ 27, 2022
27 °C

ವಾರಾಂತ್ಯ ಕರ್ಫ್ಯೂ: ಬೀದರ್‌ನಲ್ಲಿ ಮಾರುಕಟ್ಟೆ ಬಂದ್, ಜನ ಸಂಚಾರ ವಿರಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಕೋವಿಡ್ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದ ಕಾರಣ ಮಾರುಕಟ್ಟೆ ಪ್ರದೇಶ ಸಂಪೂರ್ಣ ಬಂದ್ ಆಗಿದೆ.  

ಕೇಂದ್ರ ಬಸ್ ನಿಲ್ದಾಣ, ನಗರ ಸಾರಿಗೆ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ.

ಉದಗಿರ ರಸ್ತೆ, ಗುಂಪಾ ರಸ್ತೆ, ಡಾ.ಅಂಬೇಡ್ಕರ್ ಸರ್ಕಲ್, ಬಸವೇಶ್ವರ ಸರ್ಕಲ್, ಹೈದರಾಬಾದ್ ರಸ್ತೆ ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿವೆ. ಪ್ರಮುಖ ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ.

ಅನಗತ್ಯವಾಗಿ ಸಂಚರಿಸುತ್ತಿರುವವರನ್ನು ತಡೆದು ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ಕೊಟ್ಟು ಕಳಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು