ಗುರುವಾರ , ಜೂನ್ 24, 2021
25 °C

ಕೋವಿಡ್‌: ಕಂದಾಯ ಇಲಾಖೆ ಅಧಿಕಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೊರೊನಾ ಸೋಂಕಿಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಲ್ಲಿಯ ಭೂ ಕಂದಾಯ ವಿಭಾಗದ ಸಹಾಯಕ ನಿರ್ದೇಶಕ ರವಿಕುಮಾರ (32) ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿ ಭಾನುವಾರ ನಿಧನರಾಗಿದ್ದಾರೆ.

ಕೋವಿಡ್‍ನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಹಂತಕ್ಕೆ ಬಂದಿದ್ದರು. ಆಮ್ಲಜನಕ ಸಹ ತೆಗೆಯಲಾಗಿತ್ತು. ಆದರೆ,
ಇದ್ದಕ್ಕಿದ್ದಂತೆ ಮೆದುಳಿನ ರಕ್ತ ಕ್ಲಾಟ್ ಆಗಿ, ಕೋಮಾಗೆ ಜಾರಿದ್ದರು. ತಕ್ಷಣ ಅವರನ್ನು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರವಿಕುಮಾರ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾಧಿಕಾರಿ ಕಚೇರಿಯ ಭೂ ಕಂದಾಯ ವಿಭಾಗದಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತಃ ಮೈಸೂರಿನವರಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.