ಶುಕ್ರವಾರ, ಜೂನ್ 18, 2021
21 °C
ಭಾಲ್ಕಿ ಹಿರೇಮಠದ ಹಿರಿಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿಕೆ

ಕೋವಿಡ್‌: ಪಾಲಕರನ್ನು ಕಳೆದುಕೊಂಡ ಮಕ್ಕಳ ಪಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ (ಬೀದರ್ ಜಿಲ್ಲೆ): ‘ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಕೋವಿಡ್‌ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ನಮ್ಮ ಮಠ ತೆಗೆದುಕೊಳ್ಳಲಿದೆ’ ಎಂದು ಇಲ್ಲಿಯ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

‘ಮಕ್ಕಳ ಪಾಲನೆ, ಪೋಷಣೆ ಜತೆಗೆ ಅವರಿಷ್ಟದವರೆಗೆ ಶಿಕ್ಷಣ ಕೊಡಿಸಲಾಗುವುದು’ ಎಂದಿದ್ದಾರೆ.

‘ಈ ಬಗ್ಗೆ ಸಾರ್ವಜನಿಕರು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು (ಮೊ.94489 47571), ಆಡಳಿತಾಧಿಕಾರಿ ಮೋಹನ್ ರೆಡ್ಡಿ (ಮೊ. 94489 47570) ಅವರಿಗೆ ಕರೆ ಮಾಡಿ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.