ಶುಕ್ರವಾರ, ಆಗಸ್ಟ್ 12, 2022
22 °C

500 ಶಿಕ್ಷಕರಿಗೆ ಕೋವಿಡ್ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಸರಸ್ವತಿ ಶಿಕ್ಷಣ ವಿಕಾಸ ಸಮಿತಿಯ ಶ್ರೀ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರು ಸೇರಿ 500 ಜನರಿಗೆ ಉಚಿತ ಕೋವಿಡ್ ಲಸಿಕೆ ಕೊಡಲಾಯಿತು.

ವಿಧಾನ ಪರಿಷತ್‌ ಸದಸ್ಯ ಶಶಿಲ್‌ ನಮೋಶಿ ಹಾಗೂ ಡಾ.ಬಸವರಾಜ ಪಾಟೀಲ ಅಷ್ಟೂರ್ ಜಂಟಿಯಾಗಿ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

‘ಶಿಕ್ಷಕರು ಹಾಗೂ ಉಪನ್ಯಾಸಕರು ಜನಸಾಮಾನ್ಯರೊಂದಿಗೆ ಬೆರೆಯುವುದು ಅನಿವಾರ್ಯ. ಹೀಗಾಗಿ ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು’ ಎಂದು ನಮೋಶಿ ಮನವಿ ಮಾಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಣ್ಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ಕ್ಷೇತ್ರ ಸಮನ್ವಯಾಧಿಕಾರಿ ವಿಜಯಕುಮಾರ ಬೆಳಮಗಿ, ಶಿಕ್ಷಣ ಸಂಯೋಜಕ ಮಹಮ್ಮದ್ ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ವಿ.ಜಿ.ರೆಡ್ಡಿ, ತಹಶೀಲ್ದಾರ್ ಗಂಗಾದೇವಿ, ಸರ್ಕಾರಿ ನೌಕರರ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಪ್ರಭು ತುಗಾವೆ, ರಾಜಶೇಖರ ಮಂಗಳಗಿ, ಶಾಂತಕುಮಾರ ಬಿರಾದಾರ, ಕಾರ್ಯದರ್ಶಿ ಬಸವರಾಜ ಸ್ವಾಮಿ ಇದ್ದರು.

ಶಿವಕುಮಾರ ಉಪ್ಪೆ ನಿರೂಪಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ವಂದಿಸಿದರು.

ಜಿಲ್ಲಾಡಳಿತ, ಮಹಾನಗರ
ಪಾಲಿಕೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಈಶಾನ್ಯ ಶಿಕ್ಷಕರ ಸಂಘಟನೆಗಳ ಆಶ್ರಯದಲ್ಲಿ ಕೋವಿಡ್ ಲಸಿಕೆ ಕೊಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು