ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ಸಂಖ್ಯೆಯಲ್ಲಿ ಲಸಿಕಾಕರಣ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Last Updated 28 ಸೆಪ್ಟೆಂಬರ್ 2021, 14:59 IST
ಅಕ್ಷರ ಗಾತ್ರ

ಬೀದರ್: ಸಾರ್ವಜನಿಕರು ಜಿಲ್ಲೆಯಲ್ಲಿ ಬುಧವಾರ (ಸೆ.29) ನಡೆಯಲಿರುವ ಕೋವಿಡ್ ಲಸಿಕೆ ವಿಶೇಷ ಮೇಳದ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮನವಿ ಮಾಡಿದರು.

ಕೋವಿಡ್ ಲಸಿಕೆ ವಿಶೇಷ ಮೇಳದ ಪ್ರಯುಕ್ತ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಅರ್ಹರು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಲಸಿಕೆ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯಬಹುದು ಎಂದು ತಿಳಿಸಿದರು.

ಎಲ್ಲ ಇಲಾಖೆಗಳ ಅಧಿಕಾರಿಗಳು ಮೇಳದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಕೋವಿಡ್ ವಾರ್ ರೂಂ ನೆರವು ತೆಗೆದುಕೊಳ್ಳಬೇಕು. ಅಧಿಕ ಸಂಖ್ಯೆಯಲ್ಲಿ ಲಸಿಕಾಕರಣ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಅಧಿಕಾರಿಗಳು ತಮ್ಮ ಇಲಾಖೆಯ ಎಲ್ಲ ಅಧಿಕಾರಿಗಳು, ಫಲಾನುಭವಿಗಳು ಲಸಿಕೆ ಪಡೆಯುವ ದಿಸೆಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್ ಮುಂಚೂಣಿ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಸಾಹಿತಿಗಳು, ಕಲಾವಿದರು, ಶಿಕ್ಷಕರು, ಕಾಲೇಜು ವಿದ್ಯಾರ್ಥಿಗಳು, ಪೌರ ಕಾರ್ಮಿಕರು, ಕಾರ್ಮಿಕರು, ರೈತರು, ಅಂಗವಿಕಲರು, ತಾಯಂದಿರು, ಎರಡನೇ ಡೋಸ್ ಬಾಕಿ ಉಳಿಸಿಕೊಂಡವರು ಲಸಿಕೆ ತೆಗೆದುಕೊಳ್ಳುವಂತೆ ವಿಶೇಷ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಕೀರ್ತನಾ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್, ಮುಖ್ಯ ಯೋಜನಾಧಿಕಾರಿ ಎಸ್.ಎಸ್. ಮಠಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ. ರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT